Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಬಿಜಿರಾಮ್‌ಜಿ ಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ - ಸಿಇಓ ಡಾ.ಎಸ್.ಆಕಾಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ
‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್‌ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ ೧೨೫ ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ಒಂದು ದಿನದ ‘ವಿಬಿಜಿರಾಮ್‌ಜಿ’ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

Advertisement

ವಿಬಿಜಿರಾಮ್‌ಜಿ ಯೋಜನೆ ಜುಲೈ ೧ ರಿಂದ ಜಿಲ್ಲೆಯಾದ್ಯಂತ ಅನುಷ್ಠಾನಗೊಳ್ಳಲಿದೆ. ಸ್ವಯಂಪ್ರೇರಿತವಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕ ಸದಸ್ಯರ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ೧೨೫ ದಿನಗಳ ಕಡ್ಡಾಯ ಉದ್ಯೋಗ ಖಾತ್ರಿಯನ್ನು ಈ ಯೋಜನೆಯಡಿ ನೀಡಲಾಗುವುದು. ಸಮಗ್ರ ಡಿಜಿಟಲ್ ವ್ಯವಸ್ಥೆ ಮೂಲಕ ಆಡಳಿತ ಹೊಣೆಗಾರಿಕೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಆಧುನೀಕರಿಸುವುದು ಈ ಯೋಜನೆಯ ದೃಷ್ಟಿಕೋನವಾಗಿದೆ. ಕೃಷಿ ಕಾಲದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಗೆ ಸುಗಮಗೊಳಿಸಲು ಯೋಜನೆಯಡಿ ೬೦ ದಿನಗಳ ಕಾಲ ವಿರಾಮ ನೀಡುವ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರುಯ.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು ಮಾತನಾಡಿ, ವಿಬಿಜಿರಾಮ್‌ಜಿ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲು ರೂಪುರೇಷೆ ಸಿದ್ಧಪಡಿಸಿಲಾಗಿದೆ. ಯೋಜನೆಯಡಿ ಅಧಿಕಾರಿಗಳು ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದರು.

          ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ವಿಶೇಷ ತರಬೇತಿ ಪಡೆದ ಮಾಸ್ಟರ್ ತರಬೇತುದಾರರಾದ ಹೊಸದುರ್ಗ ತಾ.ಪಂ. ಸಹಾಯಕ ನಿರ್ದೇಶಕ ನಯಾಜ್ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಚಿತ್ರದುರ್ಗ ತಾ.ಪಂ. ಅಭಿವೃದ್ಧಿ ಅಧಿಕಾರಿ ಚೈತ್ರ ಯೋಜನೆಯ ಉದ್ದೇಶ ಹಾಗೂ ಸಾಂಸ್ಥಿಕ ಚೌಕಟ್ಟು ಹಾಗೂ ಸಹಾಯಕ ನಿರ್ದೇಶಕ ಯರ್ರಿಸ್ವಾಮಿ ಯೋಜನಾ ಪ್ರಕ್ರಿಯೆಯ ಹಂತಗಳ ಕುರಿತು ತಿಳಿಸಿದರು.

 ಹೊಳಲ್ಕೆರೆ ತಾ.ಪಂ. ಸಹಾಯಕ ನಿರ್ದೇಶಕ ನಟರಾಜ್ ಯೋಜನೆಯ ಹಣಕಾಸು ವ್ಯವಸ್ಥೆ ಮತ್ತು ಸಾಮಾಜಿಕ ಪರಿಶೋಧನೆ ಕುರಿತು  ಹಾಗೂ ಹೊಸದುರ್ಗ ತಾ.ಪಂ. ತಾಂತ್ರಿಕ ಸಂಯೋಜಕ ಸಂತೋಷ್ ಯೋಜನೆಯ ತಂತ್ರಜ್ಞಾನದ ಪಾತ್ರ ಮತ್ತು ಅನುಮತಿಸಲಾದ ಕಾಮಗಾರಿಗಳು ಕುರಿತು ತರಬೇತಿ ನೀಡಿದರು.

          ಕಾರ್ಯಾಗಾರದಲ್ಲಿ ೬ ತಾಲ್ಲೂಕು ಪಂಚಾಯಿತಿಗಳು ಅಧಿಕಾರಿಗಳು, ಪಿಡಿಒಗಳು, ಸಂಯೋಜಕರು ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಐಇಸಿ ಸಂಯೋಜಕ ಎಂ.ಎಸ್.ರವೀಂದ್ರನಾಥ್ ಕಾರ್ಯಕ್ರಮ ನಿರೂಪಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ