LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ವೇದಗಳನ್ನು ನಾಲ್ಕು ಭಾಗಗಳಾಗಿ ವ್ಯವಸ್ಥಿತವಾಗಿ ವಿಂಗಡಿಸಿದ ಮಹರ್ಷಿ ವೇದವ್ಯಾಸರು ಭಾರತೀಯ ಸನಾತನ ಧರ್ಮವನ್ನು ಪ್ರಸಾರ ಮಾಡಿ ಸಂರಕ್ಷಿಸಿದ   ಮಹಾನ್ ಸಂತ ಮಹಾತ್ಮರು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥೆ ಎಚ್. ಲಕ್ಷ್ಮೀದೇವಮ್ಮ ತಿಳಿಸಿದರು.

ನಗರದ ತ್ಯಾಗರಾಜನಗರದ ಸದ್ಭಕ್ತರಾದ ತಿಪ್ಪಮ್ಮ ಉಮಾಶಂಕರ್ ಅವರ ಸೂಜಿ ಮಲ್ಲೇಶ್ವರ ನಿವಾಸದಲ್ಲಿ "ಗುರು ಪೂರ್ಣಿಮೆ"ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು "ಗುರು ಪೂರ್ಣಿಮೆ"ಯ ವಿಶೇಷತೆಗಳ ಬಗ್ಗೆ ಉಪನ್ಯಾಸ ನೀಡಿದರು.        

            ಆಷಾಡ ಪೂರ್ಣಿಮೆಯನ್ನು ವ್ಯಾಸ ಪೂರ್ಣಿಮೆಯಾಗಿ ಆಚರಿಸಲಾಗುತ್ತದೆ. ವ್ಯಾಸರು ಪರಾಶರ ಮುನಿ ಮತ್ತು ಸತ್ಯವತಿಯರ ಮಗನಾಗಿ ಜನಿಸುತ್ತಾರೆ‌‌. ಭಗವಾನ್ ವ್ಯಾಸರ ಮಗ ಶುಕ ಮಹಾಮುನಿ. ಜಗತ್ತಿನ  ಸಮಸ್ತ ಜ್ಞಾನವು ವ್ಯಾಸರಿಂದ ಸೃಷ್ಟಿಯಾಗಿದೆ‌. ಹದಿನೆಂಟು ಪುರಾಣಗಳನ್ನು, ಒಂದು ಲಕ್ಷ ಶ್ಲೋಕಗಳನ್ನು ಒಳಗೊಂಡ ಮಹಾಭಾರತವನ್ನು ಬರೆದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಮಹರ್ಷಿ ವೇದವ್ಯಾಸರ ಮಹಿಮೆಯನ್ನು ವರ್ಣಿಸಿದರು.          

ಗುರುಪೂರ್ಣಿಮೆಯ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ಗೀತಾ ನಾಗರಾಜ್, ಗೀತಾ ಪ್ರಕಾಶ್, ತಿಪ್ಪಮ್ಮ, ಮೋಹಿನಿ, ಪ್ರಮೀಳಾ ಜಗದೀಶ್, ಯಶೋಧಾ ದೇವರಾಜ್, ಗೀತಾ ಸುಂದರೇಶ್ ಅವರಿಂದ ವಿಶೇಷ ಭಜನೆ ನಡೆದರೆ ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ಆರತಿ, ಪ್ರಸಾದ ವಿನಿಯೋಗ ನಡೆಯಿತು.                    

         ವಿಶೇಷ ಸತ್ಸಂಗದಲ್ಲಿ ಸುಧಾಮಣಿ, ಪುಷ್ಪಲತಾ ವಿಜಯ್, ಜಯಮ್ಮ, ವಿಜಯಲಕ್ಷ್ಮೀ, ಪ್ರೇಮಾ, ಸುವರ್ಣ ನಾಗರಾಜ್, ಸರಸ್ವತಿ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು