Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಭ್ರಮದಿಂದ ಜರುಗಿದ ವೀರ ತಿಪ್ಪಯ್ಯ ಸ್ವಾಮಿ ಜಾತ್ರಾ ಮಹೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಕೆಳಗಿನ ಜೂಗಾನಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಗೌರಿಬಿದನೂರು ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಮಾರನೇ ದಿನ ಸಂಪ್ರದಾಯ ಬದ್ಧವಾಗಿ ನಡೆಯುವ ಶ್ರೀ ವೀರ ತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ  ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯ ಭಕ್ತಿ ಭಾವದೊಂದಿಗೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಧನ್ಯತೆ ಮೆರೆದರು.

ಜಾತ್ರೆಯ ಪ್ರಮುಖ ಆಕರ್ಷಣೆಯಾದ ಬಣ್ಣ ಬಣ್ಣದ ಹೂವುಗಳಿಂದ  ಸಿಂಗರಿಸಲ್ಪಟ್ಟ ನೀರುಬಂಡಿಗಳ ಮೆರವಣಿಗೆ ಎಲ್ಲರ ಕಣ್ಮನ ಸೆಳೆದಿತ್ತು. ರೈತರು ತಮ್ಮ ರಾಸುಗಳಿಗೆ  ಬಣ್ಣಗಳಿಂದ ಅಲಂಕರಿಸಿ, ನೀರುಬಂಡಿಗಳನ್ನು ಕಟ್ಟಿಕೊಂಡು ಭಕ್ತಿಭಾವದಿಂದ ಮೆರವಣಿಗೆ ನಡೆಸಿದ ದೃಶ್ಯ ಗಮನಾರ್ಹವಾಗಿತ್ತು.

 ಬಣ್ಣಬಣ್ಣದ ಅಲಂಕಾರಗಳಿಂದ ಸಜ್ಜುಗೊಂಡ ಎತ್ತುಗಳು, ಕಳಸಗಳು ಮತ್ತು ಸಂಪ್ರದಾಯಬದ್ಧ ನೀರು ಬಂಡಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತ್ತು.ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ರೈತರ ಜೀವನಶೈಲಿಯನ್ನು ಪ್ರತಿ ಬಿಂಬಿಸಿದ ಈ ಮೆರವಣಿಗೆಗೆ ಸಾವಿರಾರು ಜನ ಸಾಕ್ಷಿಯಾದರು.



ಮಜ್ಜಿಗೆ ಮತ್ತು ಪಾನಕ ವಿತರಣೆ:
ಅಪಾರ ಭಕ್ತರ ಸಂಭ್ರಮ ಸಡಗರ  ಜಾತ್ರೆಗೆ ವಿಶೇಷ ಮೆರುಗು ತಂದವು. ಇಂತಹ ಸಾಂಪ್ರದಾಯಿಕ ಉತ್ಸವಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂಸ್ಕೃತಿ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಧ ಮಂಜುನಾಥ್, ಮುಖಂಡರಾದ ಕುಮಾರ್, ವೀರತಿಪ್ಪಯ್ಯ ದೇವರಾಜ್ ಸೇರಿದಂತೆ  ಸುತ್ತಮುತ್ತಲಿನ ರೈತರು ಹಾಗು ಸಾವಿರಾರು ಜನ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತಿ ಭಾವ ಮೆರೆದು ಹಬ್ಬದ ಉತ್ಸಾಹ ಹಂಚಿಕೊಂಡರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ