ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮೃತ್ಯುಂಜಯ (ಮುತ್ತಣ್ಣ) ರವರು ನಿಧನರಾಗಿದ್ದಾರೆ.
68 ವರ್ಷ ವಯಸ್ಸಿನ ಮುತ್ತಣ್ಣ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅನಾರೋಗ್ಯದ ಕಾರಣ ಇತ್ತೀಚೆಗೆ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಲಕಾರಿಯಾಗದೆ ಶುಕ್ರವಾರ ಬೆಳಿಗ್ಯೆ ನಿಧನ ಹೊಂದಿದ್ದಾರೆ.
ವಿವಿಧ ಸರ್ಕಾರಿ ಇಲಾಖೆಗಳು, ಪೊಲೀಸ್ ಇಲಾಖೆ, ತಾಲೂಕಿನ ಪ್ರಮುಖ ರಾಜಕೀಯ ಪಕ್ಷಗಳು ಸೇರಿದಂತೆ ಹಲವಾರು ಸಂಘಟನೆಗಳ ಒಡನಾಡಿಯಾಗಿ ಪ್ರಮುಖವಾಗಿ ಘಾಟಿ ಸುಬ್ರಮಣ್ಯ ದೇವಾಲಯದ ಮಾಧ್ಯಮ ವಕ್ತಾರರಂತೆ ಸೇವೆ ಸಲ್ಲಿಸಿರುವ ಮುತ್ತಣ್ಣ ತಾಲೂಕಿನ ಅನೇಕ ಕಾರ್ಯಕ್ರಮಗಳ ಮಾಹಿತಿಯನ್ನು ಮಾಧ್ಯಮ ಮಿತ್ರರಿಗೆ ತಲುಪಿಸಿ ಹೆಚ್ಚಿನ ರೀತಿಯಲ್ಲಿ ಪ್ರಚಾರವಾಗಲು ಮುತ್ತಣ್ಣ ಶ್ರಮಿಸಿದ್ದರು.
ಮುತ್ತಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ಟಿ. ವೆಂಕಟರಮಣಯ್ಯ, ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.



