Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮೇ 05 ರಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಗಣತಿ ಗಣತಿ-ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಸಂಬಂಧ ಮೇ 05 ರಿಂದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳಲಿದ್ದು, ಸಮೀಕ್ಷೆಯು ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

  ಮೊದಲ ಹಂತದ ಸಮೀಕ್ಷೆಯನ್ನು ಮೇ 05 ರಿಂದ 17 ರವರೆಗೆ ಮನೆ-ಮನೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳುವುದು. ಎರಡನೇ ಹಂತವು ಮೇ 19 ರಿಂದ 21 ರವರೆಗೆ ಸಮೀಕ್ಷೆ ಬ್ಲಾಕ್ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ ಭೇಟಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವುದು. ಮೂರನೇ ಹಂತ ಮೇ 19 ರಿಂದ 21 ರವರೆಗೆ ಸ್ವಯಂ ಘೋಷಣೆ (ಆನ್ಲೈನ್ ಮೂಲಕ) ಸಮೀಕ್ಷೆಗೆ ಮಾಹಿತಿ ಒದಗಿಸಬಹುದಾಗಿದೆ.

ಸಮೀಕ್ಷಾ ಕಾರ್ಯದ ಪೂರ್ವಭಾವಿಯಾಗಿ ರಾಜ್ಯ ಮಟ್ಟದಲ್ಲಿ ನಡೆದ ತರಬೇತಿಗೆ ಚಿತ್ರದುರ್ಗ ಜಿಲ್ಲಾ ಹಂತದಿಂದ 03 ಮಾಸ್ಟರ್ ಟ್ರೈನರ್ಗಳನ್ನು ನಿಯೋಜಿಸಲಾಗಿದ್ದು, ಟ್ರೈನರ್ಗಳು 2025 ಏಪ್ರಿಲ್ 25ರಂದು ಬೆಂಗಳೂರಿನಲ್ಲಿ ನಡೆದ ತರಬೇತಿಯಲ್ಲಿ ಭಾಗವಹಿಸಿ, ಸಮೀಕ್ಷಾ ಕಾರ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು 2025 ಏಪ್ರಿಲ್ 28ರಂದು ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯದಲ್ಲಿ 06 ತಾಲ್ಲೂಕುಗಳಿಂದ ನಿಯೋಜಿಸಿರುವ ತಾಲ್ಲೂಕು ಮಟ್ಟದ 30 ಮಾಸ್ಟರ್ ಟ್ರೈನರ್ಗಳಿಗೆ ತರಬೇತಿಯನ್ನು ನೀಡಲಾಗಿರುತ್ತದೆ.

ಮೇ 02ರಂದು ತಾಲ್ಲೂಕು ಹಂತದಲ್ಲಿ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಿಂದ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವ ಗಣತೀದಾರರಿಗೆ ಮತ್ತು ಮೇಲ್ವಿಚಾರಕರುಗಳಿಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನೊಳಗೊಂಡ ತಾಲ್ಲೂಕು ಸಮನ್ವಯ ಸಮಿತಿಯ ನೇತೃತ್ವದಲ್ಲಿ ತರಬೇತಿಯನ್ನು ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು 2025 ಮಾರ್ಚ್ 27ರಂದು ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು.

ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸುವ ಸಲುವಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಅವರು ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಿ ಆದೇಶಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವೇಳಾಪಟ್ಟಿಯನ್ವಯ ಸಮೀಕ್ಷಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಪರಿಶಿಷ್ಟ ಜಾತಿ ಜನಾಂಗದವರು ಗಣತೀದಾರರಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು