Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯಕೀಯ ಸ್ನಾತಕೋತ್ತರ ಪದವಿ ಕೋರ್ಸ್ ಪ್ರಾರಂಭಕ್ಕೆ ಸ್ಥಳ ಪರೀಶೀಲನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2026-27ನೇ ಸಾಲಿನ ಎಂ.ಬಿ.ಬಿ.ಎಸ್ ಕೋರ್ಸ್ ಹಾಗೂ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಎಂ.ಡಿ. ಪದವಿಗಳ ಕೋರ್ಸ್ಗಳನ್ನು ಪ್ರಾರಂಭಿಸಲು
, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನಾ ಸಮಿತಿ (ಎಲ್.ಐ.ಸಿ) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ಎಂವಿಎ ಪ್ರಕೃತಿ ಚಿಕಿತ್ಸೆ ಮತ್ತು ವೇದ ವಿಜ್ಞಾನ ಕಾಲೇಜು ಪ್ರಾಂಶುಪಾಲರು ಸಮಿತಿಯ ಅಧ್ಯಕ್ಷೆ ಡಾ. ವಿನುತಾ ರಾವ್, ಸದಸ್ಯರಾದ ಪದ್ಮಶ್ರೀ, ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಡಾ. ಶ್ರುತಿ ಎಚ್.ಪಿ, ಹಾಗೂ ಚಿತ್ರದುರ್ಗ ಬಸವೇಶ್ವರ ವೈದ್ಯಕೀಯ ಕಾಲೇಜಿನ ಡಾ. ನಾರಾಯಣ ಮೂರ್ತಿ ಅವರು ಬೆಳಿಗ್ಗೆ 9:30ಕ್ಕೆ ಆಗಮಿಸಿ, ಬೆಳಿಗ್ಗೆ 9:40ಕ್ಕೆ ಹಾಜರಾತಿ ಪರಿಶೀಲನೆ ನಡೆಸಿತು.

ಸಂಸ್ಥೆಯ ಎಲ್ಲಾ ಬೋಧಕ ಸಿಬ್ಬಂದಿಗಳ ಘೋಷಣೆ ನಮೂನೆಗಳು ಮತ್ತು ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾಲೇಜು ಹಾಗೂ ಬೋಧಕ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿದರು.

ಸಂಸ್ಥೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಕ್ಕಾಗಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಯುವರಾಜ್ ಅವರು ಸ್ಥಳೀಯ ಪರಿಶೀಲನಾ ಸಮಿತಿಗೆ ವಂದನೆಗಳನ್ನು ಸಲ್ಲಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ