Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಬಗ್ಗೆ ಖರ್ಗೆ ನಡವಳಿಕೆ ಕಂಡು ಬಹಳ ಬೇಸರ-ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು? ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು. ಇದೆಲ್ಲವನ್ನೂ ತಾವು ಮರೆತು ಮಾತನಾಡಿದ್ದೀರಿ! ಇದು ತಮಗೆ ಭೂಷಣವಲ್ಲ.

ದುಃಖ ಹೇಳಿಕೊಳ್ಳಲು ಬಂದ ರೈತನ ಮೇಲೆ ಈ ಪರಿಯ ದರ್ಪ ಅಗತ್ಯವಿರಲಿಲ್ಲ. ನೀವೂ ತೊಗರಿ ರೈತರೇ ಆಗಿರಬಹುದು. ಆದರೆ 40 ಎಕರೆಯಲ್ಲಿ ಬೆಳೆಯುವ ತಮಗೂ, ಒಂದು ಅಥವಾ ಎರಡು ಎಕರೆಯಲ್ಲಿ ಬೆಳೆಯುವ ಆ ಬಡರೈತನಿಗೂ ಹೋಲಿಕೆಯೇ? ನಷ್ಟವನ್ನು ಭರಿಸುವ ಶಕ್ತಿ ನಿಮಗಿರುತ್ತದೆ, ರೈತನಿಗೆ ಆ ಶಕ್ತಿ ಇರಬೇಕಲ್ಲವೇ?

"ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯ? ತೊಗರಿ ಅಷ್ಟೆ ಅಲ್ಲ; ಉದ್ದು, ಹೆಸರು ಕೂಡ ಹಾಳಾಗಿರುವುದು ನನಗೆ ಗೊತ್ತಿದೆ. ಆರು ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು.."

ಹೀಗೆಂದರೇನು ಖರ್ಗೆಯವರೇ? ಹಿರಿಯರು ತಾವೇ ಹೇಳಬೇಕು. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು.

ನಿಮ್ಮ ನಡವಳಿಕೆ ಭಾರತೀಯ ಕಾಂಗ್ರೆಸ್ ಪಕ್ಷದ ಪರಂಪರಾಗತ ದರ್ಪ, ಅಹಂಗೆ ಸಾಕ್ಷಿ ಎಂದು ಸಚಿವ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ