Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ನಿಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಕರ್ನಾಟಕದ ಪ್ರಸಿದ್ಧ ಪತ್ರಿಕೆಯಾದ ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ್ ನಾಡಿಗೇರ್, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಭಾನುವಾರ (ಸೆ. 9) ಬೆಳಗಿನ ಜಾವ 3.30 ಸುಮಾರಿಗೆ ಹೃದಯಾಘಾತಕ್ಕೊಳಗಾದ ಅವರು ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. ಸುಮಾರು ಮೂವತ್ತು ವರ್ಷಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ ನಾಡಿಗೇರ, ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಪನ್‌ ಹೆಡ್ಡಿಂಗ್‌ಗಳ ಮೂಲಕವೇ ಕನ್ನಡ ಪತ್ರಿಕೋದ್ಯಮದಲ್ಲಿ ಖ್ಯಾತಿ ಪಡೆದಿದ್ದರು. ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ