Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ, ಮೈಸೂರು ಅರಮನೆ!

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ.

ಈ ಹಿನ್ನೆಲೆಯಲ್ಲಿ  ವಿಧಾನಸೌಧ,ಮೈಸೂರು ಅರಮನೆ,ಕೃಷ್ಣರಾಜಸಾಗರ ಆಣೆಕಟ್ಟು , ತುಂಗಭದ್ರಾ ಜಲಾಶಯ,ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು ದಿನಗಳ ಕಾಲ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.

Advertisement

ಬೆಂಗಳೂರಿನ ಪುರಭವನ,ಕೆ.ಆರ್.ಪುರಂ‌ ತೂಗುಸೇತುವೆ,ಮೈಸೂರು ಅರಮನೆ ಹಾಗೂ ಜಯಮಾರ್ತಾಂಡ ಮಹಾದ್ವಾರ,ಐತಿಹಾಸಿಕ ಹಂಪಿಯ ವಿಶ್ವವಿಖ್ಯಾತ ವಿರೂಪಾಕ್ಷೇಶ್ವರ ದೇವಾಲಯದ ಬಿಷ್ಟಪ್ಪಯ್ಯನ ಗೋಪುರ,ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ,ಜಗತ್ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿವೆ. ಸರ್ಕಾರದ ಅಭಿವೃದ್ಧಿ ಯೋಜನೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಬಿಂಬಿಸುವ ಮನಮೋಹಕ ಎಲ್‌ಇಡಿ ಪ್ರದರ್ಶನಗಳು ,ಧ್ವನಿ ಮತ್ತು ಬೆಳಕು ,ತ್ರಿ ಡಿ ಮ್ಯಾಪಿಂಗ್ ಪ್ರದರ್ಶನಗಳ ಆಯ್ದ ಕಟ್ಟಡಗಳ ಮೇಲೆ ಬಿತ್ತರಗೊಳ್ಳಲಿವೆ.

ರಾಜ್ಯದ  ವಿವಿಧ ಜಿಲ್ಲೆಗಳ ಜಿಲ್ಲಾಡಳಿತ ವತಿಯಿಂದಲೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೇರಿ ನೂರು ದಿನಗಳ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್,ಸಾರ್ವಜನಿಕರ ಕುಂದು ಕೊರತೆ ,ಅಹವಾಲು ಆಲಿಸಿ,ಪರಿಹರಿಸಲು "ಪ್ರಜಾಸೇವಾ" ಇಲಾಖೆ ಸ್ಥಾಪನೆ,ಗ್ಯಾರಂಟಿ ಯೋಜನೆಗಳಡಿ  ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ,

ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ಪಡೆ ರಚನೆ,ಕೇಂದ್ರದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಬೇಡಿಗಳ ಪ್ರಬಲ ಮಂಡನೆ,ನೂತನ ಸಿಎಸ್‌ಆರ್ ನೀತಿ ಕ್ರಮ,ಬರಪರಿಸ್ಥಿತಿ ನಿರ್ವಹಣೆಗೆ  ವಿಭಾಗವಾರು ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆ ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಒತ್ತು,  ಕೊಪ್ಪಳ, ರಾಯಚೂರು, ವಿಜಯನಗರ ,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿರುವ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹೊಸ ಸ್ಪಿಲ್ ವೇ ಗೇಟುಗಳ ಉದ್ಘಾಟನೆ, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ,72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಮುಖ್ಯಮಂತ್ರಿಗಳು ಮುಂಬರುವ ದಿನಗಳಲ್ಲಿ ದೃಢ ಕರ್ನಾಟಕದ ಸಂಕಲ್ಪಕ್ಕೆ ಮಹತ್ವದ ಹೆಜ್ಜೆಗಳನ್ನು ಇಡಲು ಆಲೋಚಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್‌.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ