ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಪ್ರತಿವರ್ಷದಂತೆ 2026-2027 ನೇ ಸಾಲಿನಲ್ಲಿ ವಿಜ್ಞಾನ ಶಿಕ್ಷಕರ ಸಾಧನೆಯನ್ನು ಗುರುತಿಸಿ, "ವಿಜ್ಞಾನ ರತ್ನ" ಪ್ರಶಸ್ತಿಯನ್ನು ಜಿಲ್ಲೆಯ 6 ಜನರಿಗೆ ಘೋಷಿಸಿದೆ.
ಚಿತ್ರದುರ್ಗ ತಾಲ್ಲೂಕಿನ ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ಸಿ.ಜಿ. ಹಾಲೇಶ್, ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಟಿ.ಜೆ ವೆಂಕಟೇಶ್, ಹೊಸದುರ್ಗ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಬಿ.ಕೆ ಪ್ರಮೀಳಾ, ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮಾಂತರ ಪ್ರೌಢಶಾಲೆಯ ಸೈಯದ್ ಸಾದಿಕ್ ಬಾಷಾ, ಮೊಳಕಾಲ್ಮೂರು ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಕೆ ವಿರೂಪಾಕ್ಷ ಹಾಗೂ ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮಾಂತರ ಪ್ರೌಢಶಾಲೆಯ ಶಿಕ್ಷಕಿ ಬಿ.ಎ ಮಮತಾದೇವಿ.
ಇವರಿಗೆ ದಿನಾಂಕ 7.9.2026 ರ ಸೋಮವಾರ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ಗೌರವಿಸಲಾಗುವುದು ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




