Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತಾಂಧ ಪುಂಡರಿಂದ ಕಲ್ಲು ತೂರಾಟ-ವಿಜಯೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಿ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುವ ಘಟನೆಗಳು ಮಂಡ್ಯ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ 'ಮೊಘಲ್ ಪ್ರೇರಣೆಯ' ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ.  ಸರ್ಕಾರದ ಈ ಪಕ್ಷಪಾತ ಹಾಗೂ ಮೃದು ಧೋರಣೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲು ಕಾರಣವಾಗುತ್ತಿದೆ. ಸರ್ಕಾರ ಮತಾಂಧರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ.

ಹಿಂದೂ ಸಮಾಜದ ಹಿರಿಯರನ್ನು ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಪೊಲೀಸ್ ಲಾಠಿಚಾರ್ಜ್ ಹಾಗೂ ಬಲವಂತದ ಪ್ರಯೋಗದಿಂದ ಜನಾಕ್ರೋಶವನ್ನು ಹತ್ತಿಕ್ಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ, ಹಿಂದೂ ಕಾರ್ಯಕರ್ತರನ್ನು ಸದೆಬಡಿಯುವ ಹುನ್ನಾರ ಸರ್ಕಾರದ ಈ ನಡವಳಿಕೆಯಿಂದ ಸ್ಪಷ್ಟವಾಗುತ್ತಿದೆ. 

ಗೃಹ ಸಚಿವರು ಈ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಹಬದಿಗೆ ತರಲು, ನಿನ್ನೆ ಗಣಪತಿ ಉತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡು ಮದ್ದೂರಿನಲ್ಲಿ ಶಾಂತಿ ನೆಲೆಸಲು ಜರೂರು ಆದ್ಯತೆ ನೀಡಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ