Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈದ್ಧಾಂತಿಕ ಬದ್ಧತೆಯೊಂದಿಗೆ ಪಕ್ಷ ಬಲವರ್ಧನೆಗೆ ವಿಜಯೇಂದ್ರ ಕರೆ​

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಸಿದ್ದಾಂತವೇ ಬದ್ಧತೆ
, ಸಂಘಟನೆಯೇ ಶಕ್ತಿ, ಜನಸೇವೆಯೇ ಗುರಿ" ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರದ ಪ್ರಗತಿ ಹಾಗೂ ಜನಸೇವೆಗಾಗಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರಂತರ ಪ್ರಯತ್ನ ಮುಂದುವರಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
​ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯ
'ಜಗನ್ನಾಥ ಭವನ'ದಲ್ಲಿ ಗುರುವಾರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹತ್ವದ ಪಕ್ಷದ ಸಂಘಟನಾ ಸಭೆ ಜರುಗಿತು.

​ಹಿರಿಯ ನಾಯಕರ ಉಪಸ್ಥಿತಿ ಮತ್ತು ಮಾರ್ಗದರ್ಶನ:
​ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್
, ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಬೈಜಯಂತ್ ಜಯ ಪಾಂಡಾ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಘನ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು. ಪಕ್ಷದ ಮುಖಂಡರಿಗೆ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ತಳಮಟ್ಟದಿಂದ ಹೇಗೆ ಕೊಂಡೊಯ್ಯಬೇಕು ಎಂಬ ಬಗ್ಗೆ ಕೇಂದ್ರ ನಾಯಕರು ಮಾರ್ಗದರ್ಶನ ನೀಡಿದರು.

​​ಈ ಉನ್ನತ ಮಟ್ಟದ ಸಂಘಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಿದ್ದರು.

​ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್‌ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ​ಪಕ್ಷದ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ಪಕ್ಷದ ಸಂಘಟನಾತ್ಮಕ ಬೆಳವಣಿಗೆಯ ಕುರಿತು ಚರ್ಚಿಸಿದರು.

​ಸಭೆಯ ಬಳಿಕ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, "ಜನ ಸೇವೆ ಮತ್ತು ರಾಷ್ಟ್ರದ ಪ್ರಗತಿಯೆಡೆಗೆ ಸೈದ್ಧಾಂತಿಕ ಬದ್ಧತೆಯೊಂದಿಗೆ ಮುನ್ನಡೆಯುತ್ತಿರುವ ನಮ್ಮ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಯಶಸ್ವಿಯಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸ ವಿಂಗಡನೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಅಭಿಯಾನಕ್ಕೆ ಚಾಲನೆಇದೇ 24ರಂದು ಮಾಸಿಕ ಗಮಕ ಕಾರ್ಯಕ್ರಮಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸುರೇಶ್ ಋಗ್ವೇದಿಸಹಕಾರ ಸಂಘದ ಆಡಳಿತ ಮಂಡಳಿ ವಜಾಕ್ಕೆ ಆಗ್ರಹಿಸಿ ಉಪನಿಬಂಧಕರಿಗೆ ದೂರುದಾರರಿಂದ ಮನವಿ"ರಾಹುಲ್ ಗಾಂಧಿ ಭಾರತ ವಿರೋಧಿ": ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಸೈದ್ಧಾಂತಿಕ ಬದ್ಧತೆಯೊಂದಿಗೆ ಪಕ್ಷ ಬಲವರ್ಧನೆಗೆ ವಿಜಯೇಂದ್ರ ಕರೆ​​"ಕಾಂಗ್ರೆಸ್ ಪಕ್ಷದ ದಯನೀಯ ಸ್ಥಿತಿ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ"- ವಾಗ್ದಾಳಿ"2024ರಲ್ಲಿ ನಿಮ್ಮ ತಮ್ಮನನ್ನು ಸೋಲಿಸಿದಂತೆ, 2028ರಲ್ಲಿ ನಿಮಗೂ ಅದೇ ಗತಿ":ಜೆಡಿಎಸ್ಚಿಕಿತ್ಸೆ ಸಿಗದೆ ಆಂಬ್ಯುಲೆನ್ಸ್‌ನಲ್ಲೇ 900 ಕಿಮೀ ಅಲೆದಾಡಿದ ಯುವಕ!ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು-ಡಾ.ಪ್ರಭಾ