Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಗಳಿಗೆ ಸುದೀರ್ಘ ಪತ್ರ ಬರೆದ ವಿಜಯೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾರ್ಚ್
7 ರಂದು 16ನೇ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಲ್ಕು ಪುಟಗಳ ಬಹಿರಂಗ ಪತ್ರ ಬರೆದಿದ್ದಾರೆ.

ಎರಡನೇ ಬಾರಿಗೆ ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರ ಚರ್ಚೆ ಆರಂಭಿಸಿರುವುದನ್ನು ವಿರೋಧಿಸುತ್ತೇನೆ. ದರ ನಿಗದಿ ಆಯೋಗಕ್ಕೆ ರಾಜ್ಯ ಸರ್ಕಾರ ಪತ್ರ ಬರೆಯದೇ ಇದ್ದಲ್ಲಿ ಮೆಟ್ರೋ ದರ ಏರಿಕೆ ಸಂದರ್ಭವೇ ಬರುತ್ತಿರಲಿಲ್ಲ ಎಂದು ಪತ್ರದಲ್ಲಿ ವಿಜಯೇಂದ್ರ ಅವರು ಉಲ್ಲೇಖಿಸಿದ್ದಾರೆ.

ಬಜೆಟ್​ನಲ್ಲಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ. ನೌಕರರಿಗೆ ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ, ಗುತ್ತಿಗೆದಾರರ ಬಾಕಿ ಕಾಮಗಾರಿಗಳ ಬಿಲ್ ಪಾವತಿಸಲಾಗದ ದಾರುಣ ಸ್ಥಿತಿಗೆ ಕರ್ನಾಟಕವನ್ನು ತಂದು ನಿಲ್ಲಿಸಿದ ಅಪಕೀರ್ತಿಗೆ ತಾವು ಗುರಿಯಾಗಬಾರದು. 16ನೇ ಬಜೆಟ್​ನಲ್ಲಿ ಕರ್ನಾಟಕಕ್ಕೆ ಆರ್ಥಿಕವಾಗಿ ಜವಾಬ್ದಾರಿಯುತ, ಅಭಿವೃದ್ಧಿ ಆಧಾರಿತ ಮಾರ್ಗಸೂಚಿ ಮಂಡಿಸಲು ಒಂದು ಅವಕಾಶವಿದೆ ತಾವು ಮಂಡಿಸಲಿರುವ ಬಜೆಟ್ ಈ ಆದ್ಯತೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಬಾರಿಯ ಬಜೆಟ್​ ಸುಸ್ಥಿರ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ವಿವೇಚನಾಯುಕ್ತ ಹಣಕಾಸು ‌ನಿರ್ವಹಣೆಗೆ ಅಡಿಪಾಯ ಹಾಕುತ್ತದೆ ಎಂದು ನಾನು ಭಾವಿಸುತ್ತೇನೆ. ಈ ಮಹತ್ವದ ಪ್ರಯತ್ನದಲ್ಲಿ ನಿಮಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ವಿಜಯೇಂದ್ರ ಅವರು ಪತ್ರ ಮುಖೇನ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು ವಿಫಲ:
ಬಿಟ್ಟಿ ಭಾಗ್ಯಗಳಲ್ಲಿ ಒಂದಾದ ಗೃಹ ಜ್ಯೋತಿ ನಂದಿಸಲು ಎಸ್ಕಾಂಗಳು ಸನ್ನದ್ಧವಾಗಿವೆ.
15 ಬಾರಿ ಬಜೆಟ್ ಮಂಡಿಸಿರುವ ದಾಖಲೆ ತಮ್ಮದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಿಟ್ಟಿ ಭಾಗ್ಯಗಳಿಗೆ ಹಣ ಸರಿದೂಗಿಸಲು ಸಮತೋಲನ ಕಳೆದುಕೊಂಡಿರುವುದು ಅವರು ಅಧಿಕಾರಕ್ಕೆ ಬಂದ ದಿನದಿಂದಲೂ ಅನಾವರಣಗೊಳ್ಳುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಆರ್ಥಿಕ ದೂರದೃಷ್ಟಿತ್ವವಿಲ್ಲದ, ಬದ್ಧತೆಯಿಲ್ಲದ ಮತ ಬ್ಯಾಂಕ್ ಆಧಾರಿತ ಯೋಜನೆಗಳು ಸೊರಗುತ್ತಿದೆ, ಅಭಿವೃದ್ಧಿ ಎನ್ನುವುದು ಗಗನಕುಸುಮವಾಗಿದೆ, ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಇದರ ನಡುವೆ ಪಂಚ ಗ್ಯಾರಂಟಿಯ ಯೋಜನೆಗಳು ತೋರಿಕೆಗೆ, ಹೇಳಿಕೆಗೆ ಮಾತ್ರ ಎಂಬಂತೆ ಜನರಿಗೆ ತಲುಪುವಲ್ಲಿ ಬಹುತೇಕ ವಿಫಲವಾಗಿವೆ ಎಂದು ಅವರು ದೂರಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಸ್ಥಗಿತಗೊಂಡಂತೆ ಕಾಣುತ್ತಿದೆ, ಅನ್ನಭಾಗ್ಯ ಯೋಜನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೊಡುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆಜಿ ಅಕ್ಕಿಯ ಹೊರತುಪಡಿಸಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹೆಚ್ಚುವರಿ 5 ಕೆಜಿಯ ಅಕ್ಕಿಯೂ ಇಲ್ಲ, ಬದಲಾಗಿ ಹಣವೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿಲ್ಲ. ಯುವ ನಿಧಿ ಯೋಜನೆ ಅರ್ಜಿ ಕರೆಯುವ ಪ್ರಕಟಣೆಗಳನ್ನು ಬಿಟ್ಟರೆ ಯುವಜನರ ಖಾತೆಗಳಿಗೆ ಜಮೆಯಾದ ಬಗ್ಗೆ ಈವರೆಗೆ ವಿವರಗಳೇ ಲಭ್ಯವಾಗಿಲ್ಲ, ಶಕ್ತಿ ಯೋಜನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಈಗಾಗಲೇ ನಷ್ಟದ ಹಾದಿ ಹಿಡಿದಿದೆ. ಹೆಚ್ಚುವರಿ ದರ ಏರಿಕೆ ಪರೋಕ್ಷವಾಗಿ ಪ್ರಯಾಣಿಕರ ಮೇಲೆ ಹೇರಲಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆಗೆ ಸರ್ಕಾರ ಎಸ್ಕಾಂ ಗಳಿಗೆ ಹಣ ಪಾವತಿಸದ ಪರಿಣಾಮ ಯೋಜನೆ ಫಲಾನುಭವಿಗಳಿಂದಲೇ ವಸೂಲಿ ಮಾಡುವುದಕ್ಕಾಗಿ ಅಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಆ ಮೂಲಕ ಗೃಹ ಜ್ಯೋತಿಗೆ ಇತಿಶ್ರೀ ಆಡುವ ಮುನ್ಸೂಚನೆ ನೀಡಿದ್ದಾರೆ ಎಂದು ವಿಜಯೇಂದ್ರ ಪತ್ರ ಮುಖೇನ ವಾಗ್ದಾಳಿ ಮಾಡಿದ್ದಾರೆ.

ಪಂಚ ಗ್ಯಾರಂಟಿ(ಭಾಗ್ಯ)ಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಒಂದೂವರೆ ವರ್ಷದಲ್ಲೇ ಯೋಜನೆಗಳನ್ನು ಕಾರ್ಯಗತ ಮಾಡುವಲ್ಲಿ ಸಂಪೂರ್ಣ ಎಡವಿದೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದ್ದು, ಕೃಷಿ ಸೇರಿದಂತೆ ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಬಿಡಿಗಾಸು ಇಲ್ಲದೆ ಬರಿಗೈಯಲ್ಲಿ ಕೈ ಚಾಚಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ‌ ಎಂದು ಅವರು ದೂರಿದ್ದಾರೆ.

ಕಾಂಗ್ರೆಸ್ಸಿಗರಿಗೆ ಅಧಿಕಾರ ಅನುಭವಿಸಲು ಜನ ಆಯ್ಕೆ ಮಾಡಿಲ್ಲ, ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿ ಚುನಾಯಿಸಿದ್ದಾರೆ. ಆದರೆ ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲವೂ ಮಣ್ಣು ಪಾಲಾಗುತ್ತಿವೆ. ಸ್ವಪ್ರತಿಷ್ಠೆ, ಸ್ವಾರ್ಥ, ಭ್ರಷ್ಟಾಚಾರದಲ್ಲಿ ಮುಳುಗೇಳುವ ಗುರಿಯನ್ನು ಮಾತ್ರ ಈ ಕಾಂಗ್ರೆಸ್ ಸರ್ಕಾರ ಇಟ್ಟುಕೊಂಡಂತೆ ಕಾಣುತ್ತಿದೆ. 2025 ಜನತೆ ಹಾಗೂ ರಾಜ್ಯದ ಪಾಲಿಗೆ ಕರಾಳ ವರ್ಷವಾಗುವ ಸೂಚನೆ ಕಾಣುತ್ತಿದೆ, ಜನಾಕ್ರೋಶ ಭುಗಿಲೇಳುವ ಮುನ್ನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಕೊಟ್ಟು ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲಿ ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ