Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಟ್ಟಡ ನಿಯಮ ಉಲ್ಲಂಘನೆ: ವಿನಾಯಿತಿ ಮಿತಿ ಶೇ. 15ಕ್ಕೆ ಹೆಚ್ಚಿಸಲು ಸರ್ಕಾರದ ಚಿಂತನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಬೆಂಗಳೂರು:
ರಾಜ್ಯದಲ್ಲಿ ಕಟ್ಟಡ ನಿರ್ಮಾಣ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಳ್ಳಲು ಮುಂದಾಗಿದೆ.

ಪ್ರಸ್ತುತ ಇರುವ ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡಾ 5 ರಿಂದ ಶೇಕಡಾ 15 ಕ್ಕೆ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.

​​ವಿನಾಯಿತಿ ಮಿತಿ ಹೆಚ್ಚಳ: ಕಟ್ಟಡದ ಎತ್ತರ, ಎಫ್‌.ಎಲ್.ಆರ್ (FAR), ಮತ್ತು ಸೆಟ್ ಬ್ಯಾಕ್ ನಿಯಮಗಳ ಉಲ್ಲಂಘನೆಯ ವಿನಾಯಿತಿ ಮಿತಿಯನ್ನು ಈಗಿರುವ ಶೇ. 5 ರ ಬದಲಾಗಿ ಶೇ. 15 ಕ್ಕೆ ಹೆಚ್ಚಿಸಲಾಗಿದೆ.

​ಸ್ವಾಧೀನಾನ್ಭವ ಪ್ರಮಾಣ ಪತ್ರ (OC):
ಶೇ. 15 ರಷ್ಟು ಪ್ರಮಾಣದ ನಿಯಮ ಉಲ್ಲಂಘನೆಗಳಿರುವ ಕಟ್ಟಡಗಳಿಗೆ ನಿಗದಿತ ದಂಡವನ್ನು ಪಾವತಿಸಿಕೊಂಡು, 'ಸ್ವಾಧೀನಾನ್ಭವ ಪ್ರಮಾಣ ಪತ್ರ' (Occupancy Certificate) ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

​ಸುಪ್ರೀಂ ಕೋರ್ಟ್ ಆದೇಶ: ಸ್ವಾಧೀನಾನ್ಭವ ಪ್ರಮಾಣ ಪತ್ರ ಪಡೆಯದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸರಬರಾಜು ಸೌಕರ್ಯವನ್ನು ಒದಗಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

​ಸಚಿವ ಸಂಪುಟದಲ್ಲಿ ತೀರ್ಮಾನ: ಈ ಆದೇಶದಿಂದ ಸಾರ್ವಜನಿಕರಿಗೆ ಎದುರಾಗಿರುವ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ, ಮುಂದಿನ ಸಚಿವ ಸಂಪುಟ (Cabinet) ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

​ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರೆ ಸಚಿವರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಪ್ರಮುಖ ನಿರ್ಧಾರದ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ಇದರಿಂದಾಗಿ ನಿಯಮಾವಳಿಗಳ ಸಣ್ಣಪುಟ್ಟ ಉಲ್ಲಂಘನೆಗಳಿಂದಾಗಿ ಒಸಿ (OC) ಸಿಗದೆ, ವಿದ್ಯುತ್ ಹಾಗೂ ನೀರಿನ ಸಂಪರ್ಕ ವಂಚಿತರಾಗಿದ್ದ ಸಾವಿರಾರು ಕಟ್ಟಡ ಮಾಲೀಕರಿಗೆ ದೊಡ್ಡ ರಿಲೀಫ್ ಸಿಗುವ ಸಾಧ್ಯತೆಯಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!