Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಹಿಂಸೆ ಹಾಗೂ ಪ್ರಚೋದನೆ ತಡೆದರೆ ಸಮಾಜದ ಒಳಿತು ಸಾಧ್ಯ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. 

ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ.

ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ.  ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಹಿಂಸೆ, ದ್ವೇಷವನ್ನು ಪ್ರಚೋದಿಸುವುದನ್ನು ತಡೆದಾಗ ಮಾತ್ರ ಸಮಾಜದ ಒಳಿತು ಸಾಧ್ಯವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉತ್ತಮ ಅಧಿಕಾರಿಗಳಿದ್ದಲ್ಲಿ ಅಂತಹ ಕಡೆ ಅಪರಾಧಗಳು ಕಡಿಮೆಯಿರುವುದು ಗಮನಾರ್ಹ. ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ.

ಹಿರಿಯ ಅಧಿಕಾರಿಗಳು ಕೆಳ ಮಟ್ಟದ ಪೊಲೀಸ್ ಅಧಿಕಾರಿಗಳ ಜೊತೆಗೆ ಉತ್ತಮವಾದ ಬಾಂಧವ್ಯವನ್ನು ಇಟ್ಟುಕೊಂಡು ಕೆಲಸ  ಮಾಡುವುದು ಒಳ್ಳೆಯದು. ಹಿರಿಯ ಅಧಿಕಾರಿಗಳು ಆಗಾಗ್ಗೆ ಪೋಲೀಸ್ ಠಾಣೆಗೆ ಭೇಟಿ ನೀಡಬೇಕು. ಇತರೆ ಇಲಾಖೆಗಳಿಗೆ ಹೋಲಿಸಿದರೆ  ಪೊಲೀಸ್ ಇಲಾಖೆಯಲ್ಲಿ ಶ್ರೇಣಿ ವ್ಯವಸ್ಥೆ ಹೆಚ್ಚಿದೆ. ಶಿಸ್ತು ಕೂಡ ಹೆಚ್ಚಿದೆ. ನೀವು ಮನಸ್ಸು ಮಾಡಿದರೆ ಅಪರಾಧಗಳು ತಾನಾಗಿಯೇ ಕಡಿಮೆಯಾಗಲು ಸಾಧ್ಯವಾಗುತ್ತದೆ.



ಕೋಮುಗಲಭೆಗಳು ಆಗಾಗ್ಗೆ ನಡೆಯುತ್ತಲೇ ಇರುವುದರಿಂದ ಕರಾವಳಿಯಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಕೋಮು ಗಲಭೆಗಳನ್ನು ಹತ್ತಿಕ್ಕುವುದು ಅಗತ್ಯವಾಗಿ ಆಗಬೇಕಿದೆ. ಕೋಮುಗಲಭೆಗಳು ನಡೆಯಬಾರದು. ಅದು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅದಕ್ಕಾಗಿ ಪ್ರಾರಂಭದಲ್ಲಿಯೇ ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ ಎಂದು ಸಿಎಂ ಸೂಚಿಸಿದರು.

ಇತ್ತೀಚೆಗೆ ನಡೆದ  ಪೊಲೀಸ್ ಸಮ್ಮೇಳನದಲ್ಲಿಯೂ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. 2023 ಕ್ಕೆ ಹೋಲಿಸಿದರೆ ಸೈಬರ್ ಅಪರಾಧಗಳು 2024 ರಲ್ಲಿ ಹೆಚ್ಚಾಗಿವೆ. ಕೊಲೆ, ದರೋಡೆ, ಸರಗಳ್ಳತನ ಮುಂತಾದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಾದಕ ವಸ್ತುಗಳಿಂದ ನಮ್ಮ ಯುವ ಪೀಳಿಗೆ ಹಾಳಾದರೆ ಭವಿಷ್ಯ ಹಾಳಾಗುತ್ತದೆ.

ಪೊಲೀಸರನ್ನು ಕಂಡರೆ ನಾಗರಿಕರಿಗೆ  ಭಯ ಹಾಗೂ ಸ್ನೇಹ ಎರಡೂ ಇರಬೇಕು. ಪೋಲಿಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ನಾಗರಿಕರೊಂದಿಗೆ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು, ಆಗ ಪರಿಹಾರಗಳು ಹೊಳೆಯುತ್ತವೆ. ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು. ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.


ಪೊಲೀಸ್ ಸಮುದಾಯ ಭವನ ಸುಸಜ್ಜಿತವಾಗಿದ್ದು ನಿರ್ವಹಣೆಗೆ ಅಗತ್ಯವಿರುವಷ್ಟು ಆದಾಯ ಬರುವಂತೆ ಮಾಡಿಕೊಳ್ಳಬೇಕು. ಖಾಸಗಿಯವರಿಗೆ ಸ್ವಲ್ಪ ಹೆಚ್ಚಿನ ದರದಲ್ಲಿಯೇ ನೀಡಿದರೂ ಪೊಲೀಸ್ ಪೇದೆಗಳು ಹಾಗೂ ಸಹಾಯಕ ಪೊಲೀಸ್ ನಿರೀಕ್ಷಕರಿಗೆ ಕಡಿಮೆ ದರದಲ್ಲಿ ಅಥವಾ ನಿರ್ವಹಣಾ ವೆಚ್ಚ ಪಡೆದು ಸಮುದಾಯ ಭವನವನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಪೊಲೀಸ್ ಪೇದೆಗಳು ಅಪರಾಧಗಳನ್ನು ಕಡಿಮೆ ಮಾಡಲು ಹಗಲು ರಾತ್ರಿ ಕೆಲಸ ಮಾಡುತ್ತಾರೆ. ಪೇದೆಗಳು ಹಾಕುವ ಟೋಪಿಗಳ ಬದಲಿಗೆ ಪಿ ಕ್ಯಾಪ್ ಒದಗಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ.

ಪೊಲೀಸ್ ವೈದ್ಯಕೀಯ ತಪಾಸಣಾ ವೆಚ್ಚವನ್ನು ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಿಸಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯ ಬಿದ್ದರೆ ಹೆಚ್ಚಿಸಲಾಗುವುದು.

ಬೆಂಗಳೂರು ದೊಡ್ಡದಾಗಿ ಬೆಳೆಯುತ್ತಿರುವ ನಗರ. ಎಂಟು ಪೊಲೀಸ್ ವಿಭಾಗಗಳನ್ನು 11 ವಿಭಾಗಗಳಿಗೆ ಹೆಚ್ಚಿಸಿದ್ದು, ಡಿಸಿಪಿಗಳನ್ನು ಕೂಡ ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವುದು ಅಗತ್ಯ. ಕಾರಣ ಯಾರೇ ತಪ್ಪು ಮಾಡಿದರೂ ಸರ್ಕಾರವನ್ನೇ ದೂಷಿಸಲಾಗುತ್ತದೆ. ಅಹಿತಕರ ಘಟನೆಗಳು ನಡೆದರೆ ಸರ್ಕಾರ ಜವಾಬ್ದಾರಿ. ಅಂಥ ಪರಿಸ್ಥಿತಿಗಳು ಬರದೇ ಹೋಗಲಿ ಎಂದು ಆಶಿಸುತ್ತೇನೆ. ಪೊಲೀಸರು ತಮ್ಮ ಕೆಲಸವನ್ನು ಸಮಾಜ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮಾಡಬೇಕು ಎಂದು ಸಿಎಂ ಕರೆ ನೀಡಿದರು.


ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಚಿವರಾದ ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗೃಹ ಇಲಾಖೆಯ ಆಪ್ತಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಆರ್‌ಪಿ ಎಡಿಜಿಪಿ ಉಮೇಶ್ ಅವರು ಇದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು