Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಪ ಸದಸ್ಯ ನಾಗರಾಜ್ ಯಾದವ್ ಗೆ ಸಚಿವ ಸ್ಥಾನ ನೀಡಲಿ: ಶಿವರಂಜನಿ ಯಾದವ್

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಾಗೂ ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿರುವ ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಅವರಿಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಹಿರಿಯೂರು ನಗರಸಭೆಯ ಮಾಜಿ ಅಧ್ಯಕ್ಷೆ ಶಿವರಂಜನಿ ಯಾದವ್ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 

Advertisement

ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಾಗರಾಜ್ ಯಾದವ್ ಶ್ರಮ:
"ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ
, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಗೊಲ್ಲ ಮತ್ತು ಕಾಡುಗೊಲ್ಲ ಸಮಾಜದ ಮತದಾರರನ್ನು ಕಾಂಗ್ರೆಸ್ ಪರವಾಗಿ ಸಂಘಟಿಸುವಲ್ಲಿ ನಾಗರಾಜ್ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. ಇವರ ನಿರಂತರ ಪ್ರಚಾರದ ಫಲವಾಗಿ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಯಿತು" ಎಂದು ಶಿವರಂಜನಿ ಯಾದವ್ ಸ್ಮರಿಸಿದ್ದಾರೆ.

ಬಿಎಂಟಿಸಿ ಯಶಸ್ವಿ ನಿರ್ವಹಣೆ ಮತ್ತು ಸಮಾಜ ಸೇವೆ:
ನಾಗರಾಜ್ ಯಾದವ್ ಅವರ ಸಾಧನೆಗಳನ್ನು ಮುಂಚೂಣಿಗೆ ತಂದಿರುವ ಅವರು, ಯಶಸ್ವಿ ಆಡಳಿತ: ಬಿ.ಎಂ.ಟಿ.ಸಿ. ನಿಗಮದ ಅಧ್ಯಕ್ಷರಾಗಿ ಸಂಸ್ಥೆಯನ್ನು ಅತ್ಯಂತ ಲಾಭದಾಯಕವಾಗಿ ಮುನ್ನಡೆಸಿದ ಹೆಗ್ಗಳಿಕೆ ಇವರದ್ದಾಗಿದೆ.

ಉಚಿತ ಶಿಕ್ಷಣ: ತಮ್ಮದೇ ಆದ ವಿದ್ಯಾಸಂಸ್ಥೆಗಳ ಮೂಲಕ ಬಡವರು, ಹಿಂದುಳಿದವರು ಹಾಗೂ ದೀನದಲಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ.

ಆರೋಗ್ಯ ಸಹಾಯ: ಇಂದಿಗೂ ಬಡವರು ಮತ್ತು ನಿರ್ಗತಿಕರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವಾಗ ವೈಯಕ್ತಿಕವಾಗಿ ಧನಸಹಾಯ ಮಾಡುತ್ತಾ ಜನಾನುರಾಗಿಯಾಗಿದ್ದಾರೆ.

ಹಿರಿಯೂರು ನಗರಸಭೆ ಅಭಿವೃದ್ಧಿ: ಹಿರಿಯೂರು ನಗರಸಭೆಯ ಅಧ್ಯಕ್ಷರಾಗಿ ತಾವು (ಶಿವರಂಜನಿ ಯಾದವ್) ಆಯ್ಕೆಯಾಗಲು ಹಾಗೂ ಸ್ಥಳೀಯವಾಗಿ ಪಕ್ಷ ಸಂಘಟನೆ ಬಲಗೊಳ್ಳಲು ನಾಗರಾಜ್ ಯಾದವ್ ಅವರೇ ಕಾರಣಭೂತರಾಗಿದ್ದಾರೆ.

ಸದನದಲ್ಲಿ ಸಮುದಾಯದ ಧ್ವನಿ:
ಕಾಡುಗೊಲ್ಲ ಸಮಾಜಕ್ಕೆ ಎಸ್.ಟಿ. ಮೀಸಲಾತಿ ಸಿಗಬೇಕು ಎಂಬ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ನಾಗರಾಜ್ ಯಾದವ್ ಅವರು, ಕಾಡುಗೊಲ್ಲ ನಿಗಮ ಮಂಡಳಿಗೆ ಶೀಘ್ರ ಅಧ್ಯಕ್ಷರ ನೇಮಕ ಹಾಗೂ ಎಸ್.ಟಿ. ಮೀಸಲಾತಿ ಸೇರ್ಪಡೆ ಕುರಿತು ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ.

ಶಿವರಂಜನಿ ಯಾದವ್ ಆಗ್ರಹ:
"ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದು, ಹಟ್ಟಿಗಳ ಸಮಗ್ರ ಅಭಿವೃದ್ಧಿ, ಹಿಂದುಳಿದ ವರ್ಗಗಳ ಮೂಲಭೂತ ಸೌಕರ್ಯ, ರಾಜಕೀಯ ಸ್ಥಾನಮಾನ ಹಾಗೂ ಶಿಕ್ಷಣದ ಬಗ್ಗೆ ಸದಾ ಚಿಂತಿಸುವ ನಾಗರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಗೊಲ್ಲ/ಯಾದವ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು."

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು