Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗೋಹತ್ಯೆ ನಿಷೇಧ ಕಾಯ್ದೆಯನ್ನು ತಿದ್ದುಪಡಿ ತರಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಗೋರಕ್ಷಾ ವಿಭಾಗದ ಪದಾಧಿಕಾರಿಗಳು ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ
, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

 ಬಜರಂಗದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆ ಹಾಗೂ ಕಾರ್ಯಕರ್ತರ ಮೇಲೆ ಸವಾರಿ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಗೋವುಗಳನ್ನು ಕದ್ದು ಸಾಗಾಟ ಮಾಡುವುದು ಮತ್ತು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಾಟ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಜಿಹಾದಿಗಳು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೂ ಪ್ರಬಲವಾದ ಗೋಹತ್ಯೆ ಕಾನೂನು ಜಾರಿಯಲ್ಲಿತ್ತು.

ಗೋವುಗಳನ್ನು ಕದ್ದು ಸಾಗಾಟ ಮಾಡುವವರನ್ನು ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಬಲ ಕಾನೂನನ್ನು ಹಿಂದಿನ ಬಿಜೆಪಿ ಸರಕಾರ ಜಾರಿಗೊಳಿಸಿತ್ತು. ಸಿದ್ದರಾಮಯ್ಯ ಸರಕಾರ ಒಂದು ವರ್ಗವನ್ನು ಓಲೈಸುವ ಉದ್ದೇಶದಿಂದ ಕಾನೂನನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ.. ಗೋ ಕಳ್ಳರಿಗೆ, ಜಿಹಾದಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಾನೂನು ದುರ್ಬಲಗೊಳಿಸಲು ಹೊರಟಿದೆ. ಕಾಂಗ್ರೆಸ್ ಸರಕಾರದ ಕ್ರಮವನ್ನು ಹಿಂದೂ ಸಮಾಜ ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಜರಂಗದಳ ಕೋಲಾರ ವಿಭಾಗ ಸಂಯೋಜಕ ನರೇಶ್ ಮಾತನಾಡಿ, ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರದ್ದುಗೊಳಿಸಲು ಈಗಿನ ಕಾಂಗ್ರೆಸ್ ಸರ್ಕಾರ ಉದ್ದೇಶಿಸಿರುವುದನ್ನು ಕೈ ಬಿಡಬೇಕು.ಹಿಂದೂ ಸಮಾಜಕ್ಕೆ ಅತ್ಯಂತ ಪೂಜನೀಯವಾದ ಗೋವಂಶವನ್ನು ಹಿಂಸಾತ್ಮಕವಾಗಿ ಕಳ್ಳಸಾಗಾಟ ಮಾಡುವಾಗ ಪೊಲೀಸರು ವಶಪಡಿಸಿದ ಸಾಗಾಟ ವಾಹನಗಳನ್ನು ಸುಲಭದಲ್ಲಿ ಹಿಂತಿರುಗಿಸುವಂತೆ ಮಾಡಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸಡಿಲುಗೊಳಿಸಿ ತಿದ್ದುಪಡಿ ತರಲು ಮುಂದಾಗಿದ್ದಾರೆ.

ಗೋವುಗಳಿಗೆ ಹಿಂಸೆ ಹೆಚ್ಚಾಗುವ ಸಾಧ್ಯತೆ ಇರುವ ಈ ತಿದ್ದುಪಡಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೂಡ ಅತಿ ಹೆಚ್ಚು ಗೋವಿನ ಕಳ್ಳ ಸಾಗಾಟ, ಗೋವಿನ ಅಕ್ರಮ ವಧೆ, ಗೋವಿನ ಮಾಂಸ ಮಾರಾಟ ಹೆಚ್ಚಿನ ಕಡೆಯಲ್ಲಿ ನಡೆಯುತ್ತಿದೆ ಇದಕ್ಕೆ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. 

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಪವನ್ ಸ್ವಾಮಿ, ಮುಖಂಡರಾದ ಚಂದನ್, ನಾಗರಾಜ್, ನರಸಿಂಹ, ದೀಪಕ್ ರಾಹುಲ್ ಸೇರಿದಂತೆ ಕಾರ್ಯಕರ್ತರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ