ವಿಧಾನಸೌಧದಲ್ಲಿ ಜೈನ ಸ್ವಾಮೀಜಿಗಳ ಭೇಟಿ, ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಇಂದು ಜೈನ ಧರ್ಮದ ಪೂಜ್ಯ ಸ್ವಾಮೀಜಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಆಶೀರ್ವದಿಸಿದರು.
ಶಾಂತಿ-ಸೌಹಾರ್ದತೆಯ ಸಂದೇಶ: ಸಮಾಜದಲ್ಲಿ ಶಾಂತಿ, ಅಹಿಂಸೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜೈನ ಮುನಿಗಳ ಉಪದೇಶ ಮತ್ತು ಸಂದೇಶಗಳು ಅತ್ಯಂತ ಮಹತ್ವಪೂರ್ಣವಾಗಿವೆ ಎಂದು ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ಆಶೀರ್ವಾದ ಪಡೆದ ಡಿಕೆಶಿ: ರಾಜ್ಯದ ಅಭಿವೃದ್ಧಿ ಹಾಗೂ ಸಮುದಾಯಗಳ ಏಳಿಗೆಯ ಕುರಿತು ಸಮಾಲೋಚನೆ ನಡೆಸಿದ ಸ್ವಾಮೀಜಿಗಳು, ಸರ್ಕಾರಕ್ಕೆ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿ ಆಶೀರ್ವದಿಸಿದರು.




