ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಚಳ್ಳಕೆರೆ ಸಮೀಪವಿರುವ ಕುದಾಪುರದ ಡಿಆರ್‌ಡಿಓ ಕೇಂದ್ರಕ್ಕೆ ಭೇಟಿ ನೀಡಿದ್ದರು.
ಡಿಆರ್‌ಡಿಓ.ದಲ್ಲಿರುವ ವಿಜ್ಞಾನದ ಮಹತ್ವವನ್ನು ಅಲ್ಲಿನ ವಿಜ್ಞಾನಿಗಳು ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಿಆರ್‌ಡಿಓ.ದಲ್ಲಿನ ವಿಜ್ಞಾನದ ಸಂಶೋಧನೆ ಬಗ್ಗೆ ಆಸಕ್ತಿ ಹೆಚ್ಚಿಸಿಕೊಂಡ ವಿದ್ಯಾರ್ಥಿಗಳು ವಿಜ್ಞಾನಿಯಾಗಿ ಭಾರತದ ಸೇನೆಯಲ್ಲಿ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದರು.
ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಆಡಳಿತಾಧಿಕಾರಿ ಚಂದ್ರಕಲಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕ ಸಂಪತ್‌ಕುಮಾರ್ ಸಿ.ಡಿ, ಪ್ರಾಚಾರ್ಯ ಪಿ.ಬಸವರಾಜಯ್ಯ, ಹೆಚ್.ಆರ್.ಕೊಟ್ರೇಶ್, ಮುಖ್ಯ ಶಿಕ್ಷಕಿ ಜಾರೀನಾ, ಪಿ.ಆರ್.ಓ.ರವಿಕುಮಾರ್, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



