Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವೇಕಾನಂದರು ವಿಶ್ವದ ಯೂತ್ ಐಕಾನ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರದ  ಸಭಾಂಗಣದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದರ 162ನೇ  ಜಯಂತಿ ಆಚರಿಸಲಾಯಿತು.  
ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ ಜ್ಞಾನ ಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2  ಘಟಕ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ನಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸ್ನಾತಕೋತ್ತರ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಪಡೆಯಲಾಯಿತು.
ದಾವಣಗೆರೆ ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಡಾ.ಸ್ವಾಮಿ ಸ್ವಾಮಿ ವಿವೇಕಾನಂದರ ಕುರಿತು ಉಪನ್ಯಾಸ ನೀಡಿ, ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ. ವಿವೇಕಾನಂದರು ವಿಶ್ವದ ಯೂತ್ ಐಕಾನ್ ಆಗಿದ್ದು, ಅವರ  ಚಿಂತನೆಗಳನ್ನು ಆಳವಡಿಸಿಕೊಳ್ಳಬೇಕು ಎಂದು ಹೇಳಿದರು.

 ಚಿತ್ರದುರ್ಗ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಯುವರಾಜ್ ಮಾತನಾಡಿ, ನಮ್ಮ ದೇಶದ ಶಕ್ತಿ ಯುವಕರು. ಇಂದಿನ ಯುವಕರಿಗೆ ವಿದ್ಯೆ ಕಲಿಸುವ ಬಗ್ಗೆ ಉತ್ತಮ ಮಾರ್ಗದರ್ಶಕರು ಸಿಗುತ್ತಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ನಡೆಸಲಾದ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಎನ್ಎಸ್ಎಸ್ ಘಟಕ-1 ಕಾರ್ಯಕ್ರಮಾಧಿಕಾರಿ ಡಾ.ಎಂ.ಸುಂದರಂ ನಿರ್ವಹಿಸಿದರು. ಎನ್ಎಸ್ಎಸ್ ಘಟಕ-2 ಕಾರ್ಯಕ್ರಮಾಧಿಕಾರಿ ಬಿ.ಟಿ.ನಿವೇದಿತಾ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಸತ್ಯನಾರಾಯಣ, ಸ್ನಾತಕೋತ್ತರಕೇಂದ್ರದ ಡಾ.ರಾಜೇಂದ್ರ ಪ್ರಸಾದ್, ಎಸ್, ಡಾ. ಭೀಮಾಶಂಕರ ಜೋಶಿ, ಡಾ.ರೂಪೇಶ್ ಕುಮಾರ್.ಆರ್, ಡಾ. ಮಂಜುನಾಥ್, ಡಾ. ಉಷಾ ಹಾಗೂ ಕಛೇರಿ ಅಧೀಕ್ಷಕರಾದ ಗಿರಿಜಮ್ಮ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಮತ್ತು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ