Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ವಿಸ್ತರಣೆ ಸಮಯ ಬಂದಾಗ ಆಗುತ್ತದೆ-ಡಿಕೆಶಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಪುಟ ವಿಸ್ತರಣೆ ಸಮಯ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ. ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಸಮಂಜಸವಲ್ಲ ಎಂದರು.

ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರುಗಳು ಕೆಪಿಸಿಸಿ ಅಧ್ಯಕ್ಷಗಾದಿಗೆ ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಮಾಧ್ಯಮ ಮುಂದೆ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರ ಎಐಸಿಸಿಗೆ ಬಂದಿದೆ ಎಂಬ ಬಗ್ಗೆ ಕೇಳಿದಾಗ, ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೇ ಇರುತ್ತದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮ ಗಾಂಧಿಯವರು ಅಧಿಕಾರ ವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ ಎಂದರು.
ಡಿಸೆಂಬರ್
28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ.

ಸುಮಾರು 300ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಪ್ರಧಾನಿ ಭೇಟಿ: ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿ ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ.

ಗುರುವಾರದಂದು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ - ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ