Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತಗಳ್ಳತನ ಆರೋಪ ಸಂವಿಧಾನಕ್ಕೆ ಮಾಡುವ ಅಪಮಾನ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮತಪಟ್ಟಿ ಪರಿಷ್ಕರಣೆ ವೇಳೆ ಸರಿ ಇಲ್ಲದಿದ್ದರೆ ಆಕ್ಷೇಪಣೆ ಮಾಡಬೇಕಿತ್ತು. ಈಗ ಮತಗಳ್ಳತನ ಆರೋಪ ಮಾಡುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕಿಡಿ ಕಾರಿದ್ದಾರೆ.


ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜ್ಞಾನೇಶ್ ಕುಮಾರ್, ಬೂತ್ ಮಟ್ಟದ ಅಧಿಕಾರಿಗಳು ರಾಜಕೀಯ ಪಕ್ಷಗಳೊಂದಿಗೆ ಸೇರಿ ಡ್ರಾಫ್ಟ್ ರಚಿಸುತ್ತಾರೆ. ಅದಾದ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು 45 ದಿನಗಳು ಸಮಯಾವಕಾಶ ಕೊಡಲಾಗಿರುತ್ತದೆ.

ಈ ಅವದಿ ಬಹಳ ಮುಖ್ಯ. ತಪ್ಪುಗಳಾಗಿದ್ದಲ್ಲಿ ತಿದ್ದಿಕೊಳ್ಳಬಹುದು. ಅದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಹೊಂದಿರುತ್ತವೆ. ಆ 45 ದಿನಗಳ ಅವದಿಯಲ್ಲಿ ಆಕ್ಷೇಪಣೆಗಳು ಬರದೆ ಈಗ ಬಂದರೆ ಹೇಗೆ? ಇದು ಸಂವಿಧಾನಕ್ಕೆ ಮಾಡುವ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತರು ಕಿಡಿಕಾರಿದ್ದಾರೆ.

ಮತಗಳ್ಳತನ ಆಗಿದೆ ಎನ್ನುವ ಆರೋಪ ಸರಿಯಾದುದಲ್ಲ. ಸುಳ್ಳು ಹೇಳುವ ಮೂಲಕ ತಾವು ಸಂವಿಧಾನವನ್ನು ಅಪಮಾನಿಸುತ್ತಿದ್ದೀರಿ. ಆಯೋಗದ ಹೆಗಲು ಮೇಲೆ ಬಂದೂಕು ಇಟ್ಟು ರಾಜಕೀಯ ಮಾಡುತ್ತಿದ್ದಾರೆ. ಇಂತಹ ಸುಳ್ಳು ಆರೋಪಗಳಿಗೆ ಚುನಾವಣಾ ಆಯುಕ್ತ ಹೆದರುವುದಿಲ್ಲ ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.


ಚುನಾವಣಾ ಆಯೋಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ. ಯಾವುದಕ್ಕೂ ತಾರತಮ್ಯ ಮಾಡುವುದಿಲ್ಲ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಪೂರಕವಾಗಿ ಕೆಲಸ ಮಾಡತ್ತಿದೆ ಎನ್ನುವ ಆರೋಪಕ್ಕೆ ಸಿಇಸಿ ಉತ್ತರ ನೀಡಿದ್ದಾರೆ. ಮತಗಳ್ಳತನ ಆಗಿದೆ ಎನ್ನುವ ಆರೋಪಕ್ಕೂ ಉತ್ತರ ಕೊಟ್ಟಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ಬಗ್ಗೆ ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿರುವ ಹಲವಾರು ಪ್ರಕರಣಗಳಿವೆ ಎನ್ನುವ ಆರೋಪದ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿ ಆ ರೀತಿ ಬಹು ಐಡಿ ಕಾರ್ಡ್ ಹೇಗೆ ಆಗಿರುತ್ತವೆ ಎನ್ನುವ ವಿವರಣೆಯನ್ನೂ ನೀಡಿದರು.

ಒಂದು ಸ್ಥಳದಲ್ಲಿ ವೋಟರ್ ಐಡಿ ಹೊಂದಿರುವ ವ್ಯಕ್ತಿ ಬೇರೆ ಊರಿಗೆ ಹೋದಾಗ ಅಲ್ಲಿ ವೋಟರ್ ಐಡಿ ಪಡೆಯಬಹುದು. ಹಿಂದಿನ ಸ್ಥಳದಲ್ಲಿದ್ದ ವೋಟರ್ ಐಡಿ ಹಾಗೆಯೇ ಉಳಿದುಕೊಳ್ಳುವ ಸಂಭವ ಇರುತ್ತದೆ. ಫಾರ್ಮ್ ಸಲ್ಲಿಸಿ ಹಿಂದಿನದನ್ನು ತೆಗೆದುಹಾಕಬೇಕು. ಹಾಗೆ ಮಾಡದೇ ಇದ್ದಾಗ ಬೇರೆ ಬೇರೆ ಸ್ಥಳಗಳಲ್ಲಿನ ವೋಟರ್ ಐಡಿಗಳು ಉಳಿದುಕೊಳ್ಳಬಹುದು ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟನೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ