ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ೨೦೨೬ರ ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದ್ದು, ಇದನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ಮತದಾರರ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಓ) ಡಾ. ಕೆ.ಜಿ. ಪ್ರಮೋದ್ ಅವರು ಮನವಿ ಮಾಡಿದರು.
ನಗರದ ತಾಲೂಕು ಪಂಚಾಯತ್ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಜಾಥಾ ಮತ್ತು ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕು ಪಂಚಾಯತಿ ಕಚೇರಿಯಿಂದ ಆರಂಭವಾದ ಬೈಕ್ ರ್ಯಾಲಿಯು ನಗರದ ಪ್ರಮುಖ ರಸ್ತೆಯಾಗಿ ಗಾಂಧಿ ಸರ್ಕಲ್‌ವರೆಗೆ ಸಾಗಿತು. ಈ ಮೂಲಕ ಸಾರ್ವಜನಿಕರಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಮೂಡಿಸಲಾಯಿತು.
ಜಾಗೃತಿ ರ?ಯಾಲಿಯಲ್ಲಿ ಗಣ್ಯರ ಭಾಗಿ:
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸಣ್ಣರಾಜಣ್ಣ, ವ್ಯವಸ್ಥಾಪಕಿ ಶ್ವೇತಾ, ಸೈಯದ್ ಇಮ್ರಾನ್, ಸ್ವಾಮಿ, ಎನ್.ಆರ್.ಎಲ್.ಎಂ ಯೋಜನೆಯ ಟಿ.ಪಿ.ಎಂ ಸೈಫುದ್ದೀನ್, ತಾ.ಪಂ ಸಿಬ್ಬಂದಿಗಳು, ವಿಕಲಚೇತನರು ಹಾಗೂ ವಿವಿಧ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.



