Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ.
ಸಾಲು ಮರದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮಕ್ಕಳಿಲ್ಲ ಸಾಲು ಮರದ ತಿಮ್ಮಕ್ಕ ಅವರನ್ನು ಸಾಕು ಮಗ ಉಮೇಶ್‌ಬಳ್ಳೂರು ಆರೈಕೆ ಮಾಡುತ್ತಿದ್ದರು.


ಸಸಿಗಳನ್ನೇ ಮಕ್ಕಳೆಂದು ಬೆಳೆಸಿದ ವೃಕ್ಷಮಾತೆ-
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ
, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.


ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ತಿಮ್ಮಕ್ಕನವರು ಪರಿಸರ ಪ್ರೇಮ ಮೆರೆದಿದ್ದಾರೆ. ಅವರು ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ.


ಸಾಲು ಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ-
2019ರಲ್ಲಿ ಭಾರತ ಸರ್ಕಾರವು ತಿಮ್ಮಕ್ಕನವರ ಮಹತ್ತರ ಕಾರ್ಯ ಗುರುತಿಸಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು.


1995ರಲ್ಲಿ ತಿಮ್ಮಕ್ಕನವರಿಗೆ ರಾಷ್ಟ್ರೀಯ ನಾಗರಿಕ ಪ್ರಶಸ್ತಿ ಸಹ ಲಭಿಸಿತು. ಅಮೇರಿಕಾದ ಲಾಸ್ ಏಂಜಲೀಸ್ ಮತ್ತು ಓಕ್‌ ಲ್ಯಾಂಡ್‌ನಲ್ಲಿರುವ "ತಿಮ್ಮಕ್ಕನ ಸಂಪನ್ಮೂಲಗಳು" ಎಂಬ ಪರಿಸರ ಶಿಕ್ಷಣ ಸಂಸ್ಥೆಗೆ ಅವರ ಹೆಸರಿಡಲಾಗಿದೆ. ಇದು ಅವರ ಅಂತಾರಾಷ್ಟ್ರೀಯ ಮಟ್ಟದ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.

ರಾಷ್ಟ್ರೀಯ-ಅಂತರ ರಾಷ್ಟ್ರೀಯ ಗೌರವಗಳಲ್ಲದೆ, ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ ಹೀಗೆ ಹಲವಾರು ಪ್ರಶಸ್ತಿಗಳು ಸಾಲು ಮರದ ತಿಮ್ಮಕ್ಕನವರ ಸಾಧನೆಗೆ ಸಂದಿವೆ.


ಕರ್ನಾಟಕ ಸರ್ಕಾರವು ಕೂಡ ತಿಮ್ಮಕ್ಕನವರನ್ನು "ಪರಿಸರ ರಾಯಭಾರಿ" ಎಂದು ಘೋಷಿಸಿ, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿ ಗೌರವಿಸಿತ್ತು.

ತಿಮ್ಮಕ್ಕ ಅವರಿಗೆ ಸಂದ ಪ್ರಶಸ್ತಿಗಳು-
ರಾಷ್ಟ್ರೀಯ ಪೌರ ಪ್ರಶಸ್ತಿ – 1995, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ -1997. ವೀರಚಕ್ರ ಪ್ರಶಸ್ತಿ – 1997. ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ - ಇವರಿಂದ ಮಾನ್ಯತೆಯ ಪ್ರಮಾಣ ಪತ್ರ.

ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು - ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ. ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – 2000, ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – 2006, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ.

ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.

2010 ನೇ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ ಲಭಿಸಿದೆ. 2019 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು ಸಾಲು ಮರದ ತಿಮ್ಮಕ್ಕನವರು ಪಡೆದಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ