LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 5 ರಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಜುಲೈ 5ರಂದು ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಆಗಮಿಸುವ ಅವರು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿನ ಭದ್ರಾ ಮೇಲ್ದಂಡೆ ಯೋಜನೆ'ಯ ವಿವಿಧ ಪ್ಯಾಕೇಜ್‍ಗಳ ಕಾಮಗಾರಿಗಳನ್ನು ವೀಕ್ಷಿಸಿಸುವರು.

ಮಧ್ಯಾಹ್ನ 2.30 ಕ್ಕೆ ಅಜ್ಜಂಪುರಕ್ಕೆ ಆಗಮಿಸುವ ಅವರು ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ವೈ- ಜಂಕ್ಷನ್ ಮತ್ತು ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್‍ನೆಕ್ಸ್ ಕಾಮಗಾರಿ ಪರಿಶೀಲನೆ ನಡೆಸುವರು.

 

ಸಂಜೆ 4.30ಕ್ಕೆ ಗೋನೂರು ಅಕ್ಷೆಡಕ್ಟ್‍ಗೆ ಆಗಮಿಸಿ, ಚಿತ್ರದುರ್ಗ ಶಾಖಾ ಕಾಲುವೆಯ ಪ್ಯಾಕೇಜ್-11 ರ ಕಾಮಗಾರಿಗಳ ವೀಕ್ಷಣೆ ನಡೆಸುವರು. ನಂತರ ಸಂಜೆ 5.30ಕ್ಕೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯ ಕಛೇರಿ ಸಭಾಂಗಣದಲ್ಲಿ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯ ಬಳಿಕ ಸಚಿವರು ಚಿತ್ರದುರ್ಗದಿಂದ ರಸ್ತೆ ಮಾರ್ಗವಾಗಿ ಮರಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ