Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾವೆಲ್ಲ ಹಿಂದೂ ಒಂದಾಗಿರಬೇಕು-ನೀರಜ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾವೆಲ್ಲಾ ಹಿಂದೂ ಒಂದಾಗಿ ಒಗ್ಗಟ್ಟಿನಿಂದಿರಬೇಕಿದೆ. ಛಿದ್ರವಾದರೆ ಬಲವಿಲ್ಲ, ಇಂತಹ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಘಟಿತರಾಗಬೇಕಿದೆ ಎಂದು ಭಂಜರಂಗ ದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಕರೆ ನೀಡಿದರು.

ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್‌ವತಿಯಿಂದ ಏರ್ಪಡಿಸಿದ್ದ ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆಯ ಅಂಗವಾಗಿ ಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಸಮಾಜವನ್ನು ಒಡೆಯುವ ಘಟನೆಗಳು ನಡೆಯುತ್ತಿವೆ. ಇದಕ್ಕೆ ತಕ್ಕ ಉತ್ತರವನ್ನು ನಾವುಗಳು ನೀಡಬೇಕಿದೆ.

ಹಿಂದೂ ಸಾಮ್ರಾಜ್ಯ ಪುರಾತನವಾದ ಸಾಮ್ರಾಜ್ಯವಾಗಿದೆ, ಇದಕ್ಕೆ ತನ್ನದೆ ಆದ ಇತಿಹಾಸ ಇದೆ. ಇದನ್ನು ನಾವುಗಳು ಮರೆಯಬಾರದು, ಭಾರತದಲ್ಲಿ ಹಿಂದೂಗಳಿಗೆ ಮಾನ್ಯತೆ ದೂರೆಯಬೇಕಿದೆ, ನಮ್ಮನ್ನಾಳಿದ ಶ್ರೀರಾಮನ ದೇವಾಲಯವನ್ನು ಆಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದು ನಮ್ಮ ಹೆಮ್ಮೆಯ ಸಂಕೇತ ಎಂದು ತಿಳಿಸಿದರು.

ಕೋಟೆನಾಡು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಹಿಂದೂ ಮಹಾ ಗಣಪತಿಯ  ಶೋಭಾಯಾತ್ರೆ ಅತಿ ದೊಡ್ಡದಾದ ಶೋಭಾಯಾತ್ರೆ. ಇದು ದೇಶದಲ್ಲಿಯೇ ಹೆಸರುವಾಸಿಯಾಗಿದೆ. ಇಲ್ಲಿನ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗ ದಳ ಉತ್ತಮವಾದ ಕಾರ್ಯ ಮಾಡಿದೆ.

ಇಷ್ಟೊಂದು ಜನತೆಯನ್ನು ಸೇರಿಸುವುದರ ಮೂಲಕ ಅತಿ ದೊಡ್ಡದಾದ ಕಾರ್ಯ ಮಾಡಿದೆ. ಇಲ್ಲಿ ಮಠಗಳು ಸಂಖ್ಯೆ ಹೆಚ್ಚಾಗಿದ್ದು ಇದರಿಂದ ಎಲ್ಲಾ ಮಠಾಧೀಶರ ಆರ್ಶೀವಾದ ನಮ್ಮೆಲ್ಲರ ಮೇಲಿದೆ, ಇದರಿಂದ ನಮ್ಮ ಸನಾತನ ಧರ್ಮ ಗಟ್ಟಿಯಾಗಿ ನಿಂತಿದೆ ಎಂದರು.

ಈ ಸಂದರ್ಭದಲ್ಲಿ ಶಾಂತವೀರ ಶ್ರೀಗಳು, ಶಿವಲಿಂಗಾನಂದ ಶ್ರೀಗಳು, ಪುರುಷೋತ್ತಮಾನಂದ ಶ್ರೀಗಳು, ಸರ್ದಾರ್ ಸೇವಾಲಾಲ್ ಶ್ರೀಗಳು, ಮಾದಾರ ಚನ್ನಯ್ಯಶ್ರೀಗಳು, ಮಡಿವಾಳ ಶ್ರೀಗಳು, ಸಂಸದ ಗೋವಿಂದ ಕಾರಜೋಳ, ಶಾಸಕ ಕೆ.ಸಿ.ವಿರೇಂದ್ರ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ನಗರಸಭಾ ಅಧ್ಯಕ್ಷೆ ಸವಿತಾ ರಾಘವೇಂದ್ರ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಷಡಾಕ್ಷರಪ್ಪ, ಆಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಕಾರ್ತಿಕ್, ಹಿಂದೂ ಮಹಾ ಗಣಪತಿ ಸಮಿತಿ ಅಧ್ಯಕ್ಷೆ ನಯನ, ಮಾರ್ಗದರ್ಶಕ ಬದರಿನಾಥ್, ಕೇಶವ್, ಪ್ರಭಂಜನ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ