Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಕ್ಕೆ ಹಂಚಿಕೆ ಮಾಡಿರುವ ನೀರನ್ನು ನಾವು ಸಂಪೂರ್ಣ ಬಳಕೆ ಮಾಡುತ್ತಿದ್ದೇವೆ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾವೇರಿ ನ್ಯಾಯ ಮಂಡಳಿ  ರಾಜ್ಯಕ್ಕೆ  ಹಂಚಿಕೆ ಮಾಡಿರುವ ನೀರನ್ನು ನಾವು ಸಂಪೂರ್ಣ ಬಳಕೆ ಮಾಡುತ್ತಿದ್ದು ಅದು ನಮಗೆ ಸಾಲುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2018 ರಲ್ಲಿ ನ್ಯಾಯಮಂಡಳಿ  ಆದೇಶದ ಪ್ರಕಾರ 177.25 ಟಿ ಎಂ ಸಿ ನೀರನ್ನು   ಹಂಚಿಕೆ ಮಾಡಿದೆ. ಒಂದು ವರ್ಷ ಬಿಟ್ಟರೆ, ಕಳೆದ ವರ್ಷ ತಮಿಳುನಾಡಿಗೆ 305 ಟಿ ಎಂ.ಸಿ ನೀರು ಕೊಟ್ಟಿದ್ದೇವೆ ಈ ಬಾರಿಯೂ ಕೊಡುತ್ತೇವೆ ಎಂದರು.  ಈ ತಿಂಗಳಲ್ಲಿ 9 ಟಿಎಂಸಿ ನೀರು ಬಿಡಬೇಕಿದ್ದರೂ ನಾವು ಈ ತಿಂಗಳಲ್ಲಿ  22 ಟಿಎಂಸಿ ನೀರು ಒದಗಿಸಿದ್ದೇವೆ. ಕಡಿಮೆ ಕೊಟ್ಟಿರುವುದು ಒಂದೋ ಎರಡು ವರ್ಷ ಮಾತ್ರ. ಆದರೆ ಬಹುತೇಕ ಹೆಚ್ಚಿನ  ನೀರು ತಮಿಳುನಾಡಿಗೆ ನೀಡಿದ್ದೇವೆ ಎಂದರು.

177.25 ಟಿಎಂಸಿ ನೀರು ಕೊಡಲು ನಮ್ಮ ತಕರಾರಿಲ್ಲ. 177.25 ಟಿಎಂಸಿ ನೀರು ಕೊಡಲು ನಮ್ಮ ತಕರಾರಿಲ್ಲ.  ಹೆಚ್ಚಾಗಿ ನೀರು ಕೊಡುತ್ತಿದ್ದೇವೆ. ಮೇಕೆದಾಟು ಬ್ಯಾಲೆನ್ಸಿಂಗ್ ರಿಸರ್ವಾಯರ್ ನ್ನು ಅದಕ್ಕಾಗಿಯೇ ಮಾಡಬೇಕೆಂಬ ಉದ್ದೇಶವಿದೆ. ಸಂಕಷ್ಟದ ವರ್ಷಗಳಲ್ಲಿ ಮಾತ್ರ ಹಂಚಿಕೆ ಮಾಡಬೇಕು ಎಂದರು.

ಶೇ. 6% ರಷ್ಟು ನೀರಾವರಿ ಪ್ರದೇಶವನ್ನು ರಾಜ್ಯದಲ್ಲಿ ಹೆಚ್ಚಳ ಮಾಡಿದೆ ಕೇಂದ್ರ ಸರ್ಕಾರದವರು ಮೇಕೆದಾಟು ಅಣೆಕಟ್ಟಿಗೆ ಅನುಮತಿ ಕೊಡಬೇಕು ಎಂದರು. ರಾಜ್ಯದಲ್ಲಿ ಮೇಕೆದಾಟು ಸಂಬಂಧಿಸಿದಂತೆ ಕಚೇರಿಯನ್ನು ತೆರೆಯಲಾಗಿದ್ದು ಭೂ ಸ್ವಾಧೀನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿಯೂ ಇದನ್ನು ಪ್ರಸ್ತುತಪಡಿಸಿದೆ. 6% ರಷ್ಟು ನೀರಾವರಿ ಪ್ರದೇಶವನ್ನು ರಾಜ್ಯದಲ್ಲಿ ಹೆಚ್ಚಳ ಮಾಡಿದ್ದು, ಇದಕ್ಕಾಗಿ 1ಕೋಟಿ ರೂ.ಗಳನ್ನು ಮಂಡ್ಯ ಕ್ಕೆ ವಿನಿಯೋಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ದ್ವಿಭಾಷಾ ಸೂತ್ರಕ್ಕೆ  ಬದ್ಧ- ದ್ವಿಭಾಷಾ ಸೂತ್ರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣ ಪತ್ತೆ ಹಚ್ಚಿ ಪರಿಹಾರಕ್ಕೆ ಕ್ರಮ ಇತ್ತೀಚಿನ ದಿನಗಳಲ್ಲಿ ಯುವಸಮುದಾಯ ಹೃದಯಾಘಾತದಿಂದ ಮೃತಪಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಕಾರಣವೇನು ಎಂದು ಪತ್ತೆ ಹಚ್ಚಿ ಪರಿಹಾರ ಮಾರ್ಗೋಪಾಯಗಳನ್ನು ಅನುಸರಿಸಬೇಕು. ಇದಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ