Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚ ಗ್ಯಾರಂಟಿಗಳ ಮೂಲಕ ಬಡವರ ಸೇವೆ ಮಾಡುತ್ತಿದ್ದೇವೆ-ಸಿಎಂ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದು ತಿಳಿದರು.

ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ರೂ.2 ಸಾವಿರ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ 99 ಶೇ ಆಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ.

ಮಳೆ - ಬೆಳೆ ಆದರೆ ಮಾತ್ರ ಜನರು ಸುಖ - ಶಾಂತಿಯಿಂದ ಬದುಕಲು ಸಾಧ್ಯ. ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕುಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.

ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ  ಮೊದಲೇ ಈ ಅವಕಾಶ ದೊರೆಯಬೇಕಿತ್ತು.  ಹಂ.ಪ. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅವರ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು. ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ.

  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ.

ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‌ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ. ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಭಾವುಕರಾಗಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ. ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ.

ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ. ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ  ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಶ್ವವಿಖ್ಯಾತ 417ನೇ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ನಾಡಿನ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಲಾಗಿದೆ.

ಗುರುವಾರ ಬೆಳಗ್ಗೆ 9:15 ರಿಂದ 9:40 ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರಿಂದ ದಸರಾ ಮಹೋತ್ಸವ ಉದ್ಘಾಟಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ