Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ಹೋರಾಟ ಮಾಡಬೇಕು-ಖರ್ಗೆ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು
ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರಿಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಕೊಡುಗೆ. ಇವರುಗಳ ಕೊಡುಗೆಯಿಂದ ನಾವು ಈ ದೇಶವನ್ನು ಸ್ವಾತಂತ್ರ್ಯವಾಗಿ ಉಳಿಸಿ, ದೇಶದ ಐಕ್ಯತೆಗಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ದುಃಖದ ವಿಚಾರ ಎಂದರೆ, ಅಮಿತ್ ಶಾರಂತಹ ದೇಶದ ಪ್ರಮುಖ ನಾಯಕರು ಸಂವಿಧಾನವನ್ನು ಹಿಯಾಳಿಸುತ್ತಿದ್ದಾರೆ.

ಸಂವಿಧಾನ ರಚಿಸಿದವರ ಬಗ್ಗೆ ಟೀಕೆ ಮಾಡಿ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದು ಖರ್ಗೆ ವಾಗ್ದಾಳಿ ಮಾಡಿದರು.
ಪ್ರತಿಯೊಂದಕ್ಕೂ ಅಂಬೇಡ್ಕರ್ ಹೆಸರು ಜಪ ಮಾಡುತ್ತೀರಿ. ಅದರ ಬದಲು ದೇವರ ಹೆಸರು ಜಪಿಸಿದ್ದರೆ ೭ ಜನ್ಮದಲ್ಲಿ ಸ್ವರ್ಗ ಸಿಗುತ್ತಿತ್ತು ಎಂದು ಸಂಸತ್ತಿನಲ್ಲಿ ಅಮಿತ್ ಶಾ ಅವರು ಹೇಳಿದ್ದಾರೆ. ಇವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲಿಲ್ಲ. ಮೋದಿ ಅವರು ತಮ್ಮ ಭಾಷಣದಲ್ಲಿ ದೇಶವನ್ನು ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ತರಲು ಶಕ್ತಿ ತುಂಬುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ದೇಶ ೫ನೇ ಸ್ಥಾನದಿಂದ ಮುಂದಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಯುಪಿಎ ಸರ್ಕಾರದ ಶ್ರಮದಿಂದ ದೇಶವನ್ನು ಆರ್ಥಿಕವಾಗಿ ನಾಲ್ಕನೇ ಸ್ಥಾನಕ್ಕೆ ತರಲಾಗಿತ್ತು. ಆದರೆ ಈಗಿನ ಸರ್ಕಾರಕ್ಕೆ ನಾಲ್ಕನೇ ಸ್ಥಾನಕ್ಕೆ ತರಲೂ ಸಾಧ್ಯವಾಗುತ್ತಿಲ್ಲ
ಎಂದು ಖರ್ಗೆ ಟೀಕಿಸಿದರು.

ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕೆ ಮಾಡಿರುವುದನ್ನು ಮೋದಿ ಅವರಾಗಲಿ, ಅವರ ಜತೆಗಿರುವವರಾಗಲಿ ಮಾಡುತ್ತಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕಾಗಿದೆ.

ನಾಳೆ ಅಂಬೇಡ್ಕರ್ ಅವರ ಜನ್ಮಸ್ಥಳದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ದೊಡ್ಡ ಸಭೆ ನಡೆಸುತ್ತಿದ್ದು, ನಾನು ಅದರಲ್ಲಿ ಭಾಗವಹಿಸುತ್ತಿದ್ದೇನೆ. ಮೋದಿ ಹಾಗೂ ಅಮಿತ್ ಶಾ ಅವರು ದೇಶಕ್ಕೆ ಮಾಡುತ್ತಿರುವ ತೊಂದರೆ, ದೇಶದ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದರ ವಿರುದ್ಧ ಧ್ವನಿ ಎತ್ತಲಾಗುವುದು ಎಂದರು.



 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ