Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾವು ಮತ್ತೊಮ್ಮೆ ಮಕ್ಕಳಾಗಬೇಕು~ಜೀವನರಾಂ ಸುಳ್ಯ

Advertisement
ಚಂದ್ರವಳ್ಳಿ ನ್ಯೂಸ್, ಉಡುಪಿ:
ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದರು.


ಅವರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಅವಿನಾಶ್ ಕಾಮತ್ ಇವರ ನೇತೃತ್ವದಲ್ಲಿ ಕೂತು ಮಾತಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವು ನಮ್ಮ ಋಣಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ತಿಳಿಸದೆ
, ಅದನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಪರಿಪಾಠ ಬೆಳೆಯಬೇಕು ಎಂದರು.

 ಅವರ ಬದುಕಿನ ರೋಚಕ ಕಥೆಗಳನ್ನು ವಿವರಿಸುತ್ತಾ ಅವರ ಸಾಧನೆ ಯ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಉಡುಪಿಯ ಶಾರದಾ ಮಂಟಪ ರಸ್ತೆಯ ರಂಗವಲ್ಲಿ ಮನೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಿತು.

ಬದುಕಿನಲ್ಲಿ ನಡೆದ ಹಲವು  ಘಟನೆಗಳು, ಕಷ್ಟದಿಂದ ಮೇಲೆದ್ದು ಬಂದ ರೋಚಕ ಕಥೆಗಳು ಸಭಿಕರಿಗೆ ಭಾವನಾತ್ಮಕವಾಗಿ ಕಥೆಗಳ ಮೂಲಕ ವಿವರಿಸಿದರು. ಕಾರ್ಯಕ್ರಮವನ್ನು ನಿರೂಪಕ ಅವಿನಾಶ್ ಕಾಮತ್ ನೆರವೇರಿಸಿ ಕೊಟ್ಟರು.

ಕಾರ್ಯಕ್ರಮದ ಕೊನೆಯಲ್ಲಿ ಜೀವನ್ ರಾಮ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್ ,ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ , ಕಸಾಪ ಉಡುಪಿ ತಾಲೂಕಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಧ್ಯಾ ಶೆಣೈ, ಶಿಲ್ಪಾ ಜೋಶಿ ರಾಘವೇಂದ್ರ ಪ್ರಭು ಕರ್ವಾಲು, ಸಿದ್ದಬಸಯ್ಯ ಸ್ವಾಮಿ ಚಿಕ್ಕ ಮಠ ಇನ್ನಿತರರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ