LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ಜುಲೈ 31 ಕೊನೆಯ ದಿನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026-27ನೇ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಿಲ್ಲೆಯ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ
, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಜಿಲ್ಲೆಯ ಎಲ್ಲಾ ತಾಳ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.

 ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗುವ ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ಮಳೆಯ ಹಂಚಿಕೆ, ತಾಪಮಾನ, ಗಾಳಿಯ ವೇಗ ಮತ್ತು ಆದ್ರ್ರತೆ ಇತ್ಯಾದಿ ಮಾಹಿತಿಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. ಜಿಲ್ಲೆಗೆ ರಿಲಯನ್ಸ್ ಇನ್ಶೂರೆನ್ಸ್ ಕಂಪನಿ'ಯನ್ನು ನಿಗದಿಪಡಿಸಲಾಗಿದೆ.

ಪ್ರತಿ ಹೆಕ್ಟೇರ್‍ಗೆ ಅಡಿಕೆ ಬೆಳೆಗೆ 1,28,000 ವಿಮಾ ಮೊತ್ತವಿದ್ದು, ರೈತರು 6,400 ಪ್ರೀಮಿಯಂ ಪಾವತಿಸಬೇಕಾಗುತ್ತದೆ. ದಾಳಿಂಬೆ ಬೆಳೆಗೆ 1,27,000 ವಿಮಾ ಮೊತ್ತಕ್ಕೆ 6,350 ಹಾಗೂ ಮಾವು ಬೆಳೆಗೆ 80,000 ವಿಮಾ ಮೊತ್ತಕ್ಕೆ 4,000 ಪ್ರೀಮಿಯಂ ಪಾವತಿಸಬೇಕಾಗತ್ತದೆ.

ವಿಮಾ ವ್ಯಾಪ್ತಿಗೆ ಒಳಪಡುವ ಬೆಳೆಗಳು ಫಸಲು ನೀಡುವ ಹಂತದಲ್ಲಿರಬೇಕು ಹಾಗೂ ಸಾಲ ಪಡೆದಿರುವ ಮತ್ತು ಸಾಲ ಪಡೆಯದ ಇಬ್ಬರೂ ರೈತರು ಈ ವಿಮೆಗೆ ಒಳಪಡಬಹುದು. ಆದರೆ, ನೋಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ ಅಥವಾ ಮುಂಗಾರಿನ ಬೆಳೆ ಸಮೀಕ್ಷೆಯಲ್ಲಿ ಕಂಡುಬರದಿದ್ದರೆ ಅಂತಹ ಬೆಳೆಗಳ ನೋಂದಣಿಗೆ ಅನುಮತಿ ಇರುವುದಿಲ್ಲ.

ಅರ್ಹ ರೈತರು ಪ್ರಸ್ತುತ ಸಾಲಿನ ಪಹಣಿ ಪತ್ರಿಕೆ, ಎಫ್.ಐ.ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕ (ಆಧಾರ್ ಜೋಡಣೆಯಾಗಿ ಎನ್.ಪಿ.ಸಿ.ಐ ಸಕ್ರಿಯವಾಗಿರಬೇಕು) ದಾಖಲೆಗಳೊಂದಿಗೆ ಹತ್ತಿರದ ಗ್ರಾಮ-1 ಕೇಂದ್ರ, ಬ್ಯಾಂಕುಗಳು ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ