ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಲಾವಣ್ಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ. ಎ. ಮತ್ತು ಬಿ. ಕಾಂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಾವಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ವಿಶ್ವಾಸ್ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕ್ರೀಡಾ ಚಟುವಟಿಕೆ ಬಹಳ ಮುಖ್ಯವಾಗಿದೆ. ಅದರಲ್ಲೂ ಪ್ರಮುಖವಾಗಿ ಬೌದ್ಧಿಕ ಹಾಗೂ ಮಾನಸಿಕ ತರಬೇತಿಗಳು ವಿದ್ಯಾರ್ಥಿಗಳ ಭವಿಷ್ಯದ ಜೀವನಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಬಿಎಡ್ ಪ್ರಾಮ್ಶುಪಾಲ ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಮುಖ್ಯ. ಜೊತೆಗೆ ಉತ್ತಮ ಅರೋಗ್ಯ ಕಾಪಾಡಿಕೊಳ್ಳುವುದು, ದುಶ್ಚಟಗಳಿಂದ ದೂರವಿರುವುದು ವಿದ್ಯಾರ್ಥಿಗಳು ಪಾಲಿಸಬೇಕಾದ ಪ್ರಮುಖ ಅಂಶಗಳಾಗಿವೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯಶೋದಮ್ಮ ಹನುಮಂತೇಗೌಡ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಪ್ರಾoಶುಪಾಲ ಎಂ ಸಿ. ಮಂಜುನಾಥ್ ಹಾಗೂ ಬೋಧಕ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.



