ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ಅವರ ಸ್ವಾಗತ ಹಾಗೂ ನಿಕಟಪೂರ್ವ ರಾಜ್ಯಪಾಲರಾದ ಥಾವರ್ಚಂದ್ಗೆಹ್ಲೋಟ್ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂತನ ರಾಜ್ಯಪಾಲರಿಗೆ ಹೃತ್ಪೂರ್ವಕ ಸ್ವಾಗತ ಕೋರಿದರು. ಅಲ್ಲದೆ, ಕರ್ನಾಟಕದ ಅಭಿವೃದ್ಧಿ, ಜನಕಲ್ಯಾಣ ಹಾಗೂ ಸಂವಿಧಾನಾತ್ಮಕ ಆಶಯಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದೊಂದಿಗೆ ಉತ್ತಮ ಸಮನ್ವಯದೊಂದಿಗೆ ಅವರು ಕಾರ್ಯನಿರ್ವಹಿಸಲಿ ಎಂದು ಆಶಿಸಿದರು.
ಇದೇ ವೇಳೆ, ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ರಾಜ್ಯಪಾಲರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ನಿಕಟಪೂರ್ವ ರಾಜ್ಯಪಾಲರಾದ ಥಾವರ್ಚಂದ್ಗೆಹ್ಲೋಟ್ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಗೌರವಪೂರ್ವಕ ಧನ್ಯವಾದಗಳನ್ನು ಸಮರ್ಪಿಸಿದರು.

ಈ ಉನ್ನತ ಮಟ್ಟದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ರಿಜ್ವಾನ್ಅರ್ಷದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




