LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಹಾ ತೋಟದ ಕಾರ್ಮಿಕರ ಕಲ್ಯಾಣ ಮತ್ತು ಸುಸ್ಥಿರತೆಗೆ ಆದ್ಯತೆ: ಹೆಚ್.ಡಿ. ಕುಮಾರಸ್ವಾಮಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಭಾರಿ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಿ ಸ್ವಾಮ್ಯದ 'ಆಂಡ್ರ್ಯೂ ಯೂಲ್ ಆಂಡ್ ಕಂಪನಿ ಲಿಮಿಟೆಡ್' ಸಂಸ್ಥೆಯ ಚಹಾ ತೋಟದ ವ್ಯವಹಾರ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಹತ್ವದ ಪರಿಶೀಲನಾ ಸಭೆ ನಡೆಸಿದರು.

​ಸಭೆಯಲ್ಲಿ ಚಹಾ ತೋಟದ ವಲಯ ಎದುರಿಸುತ್ತಿರುವ ವಿವಿಧ ನೀತಿ-ನಿಯಮಗಳ ಸವಾಲುಗಳು, ಸಂಸ್ಥೆಯ ಸುಸ್ಥಿರತೆ ಮತ್ತು ಕಾರ್ಮಿಕರ ಹಿತರಕ್ಷಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

​ಕಾರ್ಮಿಕರ ಕಲ್ಯಾಣವೇ ಮೊದಲ ಆದ್ಯತೆ:
​ಸಭೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ತೋಟದ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

​"ಆಂಡ್ರ್ಯೂ ಯೂಲ್ ಕಂಪನಿಯ ಚಹಾ ತೋಟಗಳ ಕಾರ್ಯನಿರ್ವಹಣೆಯನ್ನು ಬಲಪಡಿಸುವುದು, ಕಾರ್ಯಾಚರಣೆಯ ಸುಸ್ಥಿರತೆಯನ್ನು ಸುಧಾರಿಸುವುದು ಮತ್ತು ಚಹಾ ತೋಟದ ವಲಯದ ಮೇಲಾಗುತ್ತಿರುವ ನೀತಿ ವಿಷಯಗಳ ಪರಿಹಾರದ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಜೊತೆ ಪರಿಣಾಮಕಾರಿಯಾಗಿ ಸಂಯೋಜನೆಗೊಳ್ಳುವ ಮೂಲಕ, ತೋಟದ ಕಾರ್ಮಿಕರ ಹಿತಾಸಕ್ತಿಗಳನ್ನು ರಕ್ಷಿಸುವುದರ ಜೊತೆಗೆ ಸಂಸ್ಥೆಯ ದೀರ್ಘಾವಧಿಯ ಯಶಸ್ಸನ್ನು ಖಾತ್ರಿಪಡಿಸಿಕೊಳ್ಳುವ ಕ್ರಮಗಳ ಬಗ್ಗೆಯೂ ಪರಿಶೀಲಿಸಲಾಯಿತು."

​​ಕೇಂದ್ರ ಭಾರಿ ಕೈಗಾರಿಕಾ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಆಂಡ್ರ್ಯೂ ಯೂಲ್ ಆಂಡ್ ಕಂಪನಿ ಲಿಮಿಟೆಡ್‌ನ ಉನ್ನತ ಅಧಿಕಾರಿಗಳು ಈ ಪ್ರಮುಖ ಸಭೆಯಲ್ಲಿ ಉಪಸ್ಥಿತರಿದ್ದು, ಚಹಾ ಉದ್ಯಮದ ಸದ್ಯದ ಪರಿಸ್ಥಿತಿ ಮತ್ತು ಮುಂದಿನ ನಡೆಗಳ ಕುರಿತು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ