Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಧನೆಯ ಹಾದಿಯಲ್ಲಿ.......ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ  ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ.........ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ............

ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ.........

ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ..........

ಆದರೆ, ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ, ನಮ್ಮ ಕಾಲೆಳೆಯುವ, ನಮಗೆ ತೊಂದರೆ ಕೊಡುವ ಜನರ ನಡುವೆ ನಾವು ವಾಸಿಸುವುದು ಕಷ್ಟವಾದಾಗ ನಾವು ಸಾಧನೆಯ ಬೆಟ್ಟವನ್ನು ‌ಏರಲು ಪ್ರಯತ್ನಿಸಬೇಕು...........

ಇಲ್ಲದಿದ್ದರೆ ಈ ಜನರ ನಡುವೆ ನಮ್ಮ ಬದುಕು ಅಸಹನೆಯಿಂದಲೇ ಮುಗಿದು ಹೋಗುತ್ತದೆ.......

ಹಾಗಾದರೆ ಸಾಧನೆ ಎಂದರೇನು ? ನಮ್ಮ ‌ಸಾಮಾನ್ಯ ಜನರ ಭಾವನೆಯಲ್ಲಿ ಹೆಚ್ಚು ಹೆಚ್ಚು ಹಣ ಮಾಡುವುದು, ಉನ್ನತ ಅಧಿಕಾರಕ್ಕೆ ಏರುವುದು, ಅಪಾರ ‌ಆಸ್ತಿ ಮಾಡುವುದು, ಪ್ರಶಸ್ತಿಗಳನ್ನು ಪಡೆಯುವುದು, ಜನಪ್ರಿಯತೆ ಗಳಿಸುವುದು,

ಒಟ್ಟಿನಲ್ಲಿ ನಮ್ಮ ಸಮಕಾಲೀನ ಇತರರಿಗಿಂತ ನೋಡುಗರ ದೃಷ್ಟಿಯಲ್ಲಿ ಹೆಚ್ಚು ಹೆಸರು ಮಾಡುವುದು ಎಂದಾಗಿದೆ.‌......
ಈ ರೀತಿಯ ಸಾಧನೆ ಮಾಡುವ ಅವಕಾಶವಿದ್ದು ಒಂದು ವೇಳೆ ನಾವು ಅದರಲ್ಲಿ ಯಶಸ್ವಿಯಾದರೆ, ನಾವು ಯಾವುದೇ ಸ್ಥಳದಲ್ಲಿ ಇದ್ದರೂ ಗೌರವ ಘನತೆಗೇನು ಕುಂದು ಬರುವುದಿಲ್ಲ........

ಅನೇಕ ಕಾರಣಗಳಿಗಾಗಿ ನಾವು ಈ ರೀತಿಯ ಸ್ಥಾನ ಮಾನ ಪಡೆಯಲು ಸಾಧ್ಯವಾಗದಿದ್ದಾಗ, ನಮ್ಮ ನಡುವಿನ ಇತರರು ಈ  ವ್ಯಾವಹಾರಿಕ ಜಗತ್ತಿನಲ್ಲಿ ನಮಗಿಂತ ಮುಂದೆ ಹೋಗಿ ನಮ್ಮನ್ನು ಕೀಳಾಗಿ ಕಂಡಾಗ ಅಥವಾ ನಮ್ಮ ಮನಸ್ಸು ಹಾಗೆ ಭಾವಿಸಿದಾಗ ನಾವು ಎತ್ತರದ ಪ್ರದೇಶಕ್ಕೆ ಹೋಗಲು ಪ್ರಯತ್ನಿಸಬೇಕು......

ಅದು ಹೇಗೆ ಸಾಧ್ಯ.? ಈ ಯಾವುದೇ ಅನುಕೂಲಗಳು ನಮಗೆ ಇಲ್ಲದಿರುವಾಗ ಸಾಧನೆಯ ಮೆಟ್ಟಿಲು ಹತ್ತುವುದು ಹೇಗೆ ? ಖಂಡಿತ ‌ಸಾಧ್ಯವಿದೆ.....ನಮ್ಮ ಇಡೀ ವ್ಯಕ್ತಿತ್ವವನ್ನು ಪುನರ್ ರೂಪಿಸಿಕೊಳ್ಳಬೇಕು ಮತ್ತು ಉನ್ನತೀಕರಿಸಿಕೊಳ್ಳಬೇಕು. ಹೇಗೆಂದರೆ...........

ಹೆಚ್ಚು ನಿರೀಕ್ಷೆಗಳನ್ನೇ ಇಟ್ಟುಕೊಳ್ಳದೆ  ಸ್ಥಿತ ಪ್ರಜ್ಞತೆಯನ್ನು ಬೆಳೆಸಿಕೊಳ್ಳಬೇಕು.......ಯಾವುದೇ ‌ಸಂದರ್ಭದಲ್ಲಿಯೂ ಯಾರ ಮೇಲೆಯೂ ಅವಲಂಬಿತವಾಗುವ ಅಥವಾ ಯಾವುದನ್ನಾದರೂ ಬೇಡುವ ಪರಿಸ್ಥಿತಿಯನ್ನು ತಿರಸ್ಕರಿಸಬೇಕು.

ಈ ಪರಿಸ್ಥಿತಿಯಲ್ಲಿಯೂ ಅನಿರೀಕ್ಷಿತವಾಗಿ ಕೆಲವು ಆಕರ್ಷಣೆಗಳು ಮತ್ತು ಅನುಕೂಲಕರ ಲಾಭಗಳು ನಮಗೆ ಒಲಿಯಬಹುದು. ಅವುಗಳನ್ನು ನಮ್ಮ ಘನತೆಗೆ ತಕ್ಕುದಾದ ಮತ್ತು ಭವಿಷ್ಯದ ನಮ್ಮ ಸ್ವಾಭಿಮಾನದ  ಬದುಕಿಗೆ ತೊಂದರೆಯಾಗದೆ ಇದ್ದರೆ ಮಾತ್ರ ಸ್ವೀಕರಿಸಬೇಕು. ಇಲ್ಲದಿದ್ದರೆ ‌ನಮ್ಮ ಮನೋಬಲ ಉಪಯೋಗಿಸಿ ತಿರಸ್ಕರಿಸಬೇಕು. ಈ ಹಂತದಲ್ಲಿ ಸಾಂಪ್ರದಾಯಿಕ ಶೈಲಿಯ ಜನರ ನಡುವೆ ಇರುವುದಕ್ಕಿಂತ ಏಕಾಂತದ ವಾತಾವರಣದಲ್ಲಿ ನಮ್ಮ ಸಮಯ ಕಳೆಯುವಂತೆ ನಮ್ಮ ಮನಸ್ಸಿನ ಅರಮನೆಗೆ ನಾವೇ ರಾಜರಾಗಬೇಕು.....

ಸಮಾಜದ ಸುತ್ತ ನಾವು ಸುತ್ತುವುದಕ್ಕಿಂತ ನಮ್ಮ ಸುತ್ತ ಸಮಾಜ ಸುತ್ತುವ ಸ್ವಯಂ ಅಹಂ ರೂಪಿಸಿಕೊಳ್ಳಬೇಕು. ನಮಗೆ ಆಸಕ್ತಿದಾಯಕ ಕ್ಷೇತ್ರವನ್ನು ಆರಿಸಿಕೊಂಡು ಅದರಲ್ಲಿ ತಪಸ್ಸಿನಂತೆ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಅದರಲ್ಲಿ ಸಾಧನೆ ಮಾಡುವ ಯಾವ ಅವಕಾಶವನ್ನೂ ಕಳೆದುಕೊಳ್ಳಬಾರದು.

ಎಲ್ಲಕ್ಕಿಂತ ಮುಖ್ಯವಾಗಿ ಸಾವಿನ ಭಯವನ್ನು ಕಡಿಮೆ ಮಾಡಿಕೊಂಡು ಅದನ್ನು ಸ್ವೀಕರಿಸಲು ಮಾನಸಿಕವಾಗಿ ಸಿದ್ದರಾಗಬೇಕು. ಸಾವಿನ ನಂತರದ ಅಂಶಗಳ ಬಗ್ಗೆ ಯೋಚಿಸಲೇಬಾರದು.

ಇದು ಎಲ್ಲವನ್ನೂ ತ್ಯಜಿಸಿ ಸನ್ಯಾಸಿಯಾಗುವ ಸ್ಥಿತಿಯಲ್ಲ. ಸಾಧನೆಗಾಗಿ ರೂಪಿಸಿಕೊಳ್ಳುವ ಸರಳ ಮಾನಸಿಕ ಜೀವನಶೈಲಿ...... ಆಗ ನಮ್ಮನ್ನು ಹಿಡಿಯಲು ಅಥವಾ ನಿಯಂತ್ರಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.

ಏನೂ ಇಲ್ಲದ ಸಂದರ್ಭದಲ್ಲಿಯೂ ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕನಿಷ್ಠ ಮಟ್ಟದ ಸರಳ ಜೀವನಶೈಲಿ ನಮ್ಮದಾದರೆ ನಮ್ಮ ವ್ಯಕ್ತಿತ್ವ ತಾನೇತಾನಾಗಿ ಮೇಲಕ್ಕೇರುತ್ತದೆ. ನಮ್ಮ ಬಡತನದ, ಸೋಲಿನ, ಅಸಹಾಯಕತೆಯ ಜೀವನ ನೋಡಿ ಅಸೂಯೆ ಪಡುವ ವ್ಯಂಗ್ಯ ಮಾಡುವ ಜನ, ತಮ್ಮ ವ್ಯಾವಹಾರಿಕ ಮತ್ತು ಸಂಬಂಧಗಳ ಏರಿಳಿತಗಳಿಂದ ಬಸವಳಿದಾಗ ನಮ್ಮ ನೆಮ್ಮದಿಯ ಜೀವನ ಅವರಿಗೆ  ಸೋಜಿಗದಂತೆ ಕಾಣುತ್ತದೆ. ಅವರುಗಳು ನಮ್ಮ ವ್ಯಕ್ತಿತ್ವದ ಮುಂದೆ ಸಣ್ಣವರಾಗಿ ಕಾಣುತ್ತಾರೆ. ಅದೇ ನಮ್ಮ ಬಹುದೊಡ್ಡ ಆತ್ಮವಿಶ್ವಾಸ. ಮಾನಸಿಕವಾಗಿ ನಾವು ಏರುವ ಎತ್ತರಕ್ಕೆ ಯಾವುದೇ ಮಿತಿಯೂ ಇಲ್ಲ..........

ಅದೇ KILLING INSTINCT......ಗೆಲ್ಲುವ ಛಲ, ಪಡೆದೇ ತೀರುವೆನೆಂಬ ಹಠ, ಯಶಸ್ಸಿಗಾಗಿ ತಹತಹಿಸುವ ಕಿಚ್ಚು, ಸೋಲನ್ನು ಒಪ್ಪಿಕೊಳ್ಳದ ಮನಸ್ಥಿತಿ, ಏನಾದರೂ - ಹೇಗಾದರೂ ಮಾಡಿ ಅಂದು ಕೊಂಡಿದ್ದನ್ನು ಸಾಧಿಸಲೇ ಬೇಕೆಂಬ ಮನೋಭಾವ, ಧಣಿವರಿಯದ ಹೋರಾಟ ಮುಂತಾದ ಎಲ್ಲಾ ಅರ್ಥಗಳನ್ನು ಆ ಇಂಗ್ಲೀಷ್ ಪದ ಒಳಗೊಂಡಿದೆ. ಹೆಚ್ಚಾಗಿ ಕ್ರೀಡೆಯಲ್ಲಿ ಈ ಪದ ಬಳಸಲ್ಪಟ್ಟರೂ ಬದುಕಿನ ಎಲ್ಲಾ ಕ್ಷೇತ್ರಗಳಿಗೂ ಇದು ಅನ್ವಯಿಸುತ್ತದೆ.

ಸಮಕಾಲೀನ ರಾಜಕೀಯ ಪರಿಸ್ಥಿತಿಗಳಿಗೆ ಇದನ್ನು ಸಮೀಕರಿಸಿ ಸಾಮಾನ್ಯರಾದ ನಾವು ಒಂದಷ್ಟು ಸ್ಪೂರ್ತಿದಾಯಕ ಅಂಶಗಳನ್ನು ಗುರುತಿಸಬಹುದು. ಈಗಿನ ಜೀವಂತ ಮತ್ತು ಸಕ್ರೀಯ ರಾಜಕೀಯದಲ್ಲಿರುವ  ಅನೇಕ ವಯಸ್ಸಾದ ರಾಜಕಾರಣಿಗಳನ್ನು ಗಮನಿಸಿ.

ಇವರ  ಸಾಮಾನ್ಯ ಅಂಶವೆಂದರೆ ಸೋಲನ್ನು ಒಪ್ಪಿಕೊಳ್ಳದ, ಗೆಲುವಿಗಾಗಿ ಹಲವು ವರ್ಷಗಳ ಕಾಯುವಿಕೆ ಮತ್ತು ನಿರಂತರ ಶ್ರಮದಾಯಕ ಹೋರಾಟವನ್ನು ಅವರಲ್ಲಿ ನೇರವಾಗಿ ಕಾಣಬಹುದು. ಎಂತಹ ಸೋಲು ಕೂಡ ಅವರನ್ನು ಕುಗ್ಗಿಸುವುದಿಲ್ಲ. ಸೋತ ಕ್ಷಣದಿಂದ ಗೆಲುವಿಗಾಗಿ ಹಪಹಪಿಸತೊಡಗುತ್ತಾರೆ. ಮಾನ ಅವಮಾನ ಅವರಿಗೆ ಲೆಕ್ಕವೇ ಇಲ್ಲ. ಭರವಸೆಗಳ ಮೇಲೆ ಭರವಸೆಗಳನ್ನು ಕೊಡುತ್ತಾ ಅವರ ಹಿಂಬಾಲಕರನ್ನು ಪ್ರೋತ್ಸಾಹಿಸುತ್ತಿರುತ್ತಾರೆ.

ಎಂತಹ ಹೀನಾಯ ಸೋಲೇ ಆಗಲಿ, ಕೊಲೆ ಅತ್ಯಾಚಾರ ಭ್ರಷ್ಟಾಚಾರದ ನಿಕೃಷ್ಟ ಆರೋಪ ಶಿಕ್ಷೆಗಳೇ ಆಗಲಿ, ಜೈಲುವಾಸವೇ ಆಗಿರಲಿ, ಅವರ ಮೇಲಿನ ಹಲ್ಲೆಗಳನ್ನು ಸಹ ಅವರು ನಿರ್ಲಕ್ಷಿಸಿ ಮತ್ತೆ ಮತ್ತೆ ಜನರ ಮಧ್ಯೆ ಬರುತ್ತಾರೆ. ಅದೇ ಉತ್ಸಾಹದಿಂದ ಭಾಷಣ ಮಾಡುತ್ತಾರೆ.

ಅವರುಗಳು ಮಾಡುವುದು ಸರಿ ಎಂದು ನಾನು ಖಂಡಿತ ಹೇಳುತ್ತಿಲ್ಲ. ಅವರ  ವ್ಯಕ್ತಿತ್ವವನ್ನು ಮೆಚ್ಚುತ್ತಿಲ್ಲ. ಆದರೆ ಅವರಲ್ಲಿರುವ ಜೀವನೋತ್ಸಾಹ ಮಾತ್ರ ‌ಖಂಡಿತ ಪ್ರೇರಣಾದಾಯಕ.

ಸಾಮಾನ್ಯ ಜನರನ್ನು ಗಮನಿಸಿ. ಕೇವಲ ಪ್ರೀತಿಗಾಗಿ, ಕೌಟುಂಬಿಕ ಕಲಹಗಳಿಗಾಗಿ, ಸಾಲಕ್ಕಾಗಿ, ಸಣ್ಣ ಪುಟ್ಟ ಅವಮಾನಗಳಿಗಾಗಿ ಜನ ಜೀವನವೇ ಮುಗಿದು ಹೋದಂತೆ ಕುಸಿದು  ಬೀಳುತ್ತಾರೆ ಮತ್ತು ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ.

ಈ ವ್ಯತ್ಯಾಸ ಏಕೆ. ಎಲ್ಲರೂ ಮನುಷ್ಯರೇ ಅಲ್ಲವೇ. ಈ‌ ಪ್ರಕೃತಿ, ಈ ಸಮಾಜ, ಈ ಸರ್ಕಾರ, ನ್ಯಾಯ ಅನ್ಯಾಯ ನೀತಿ ಅನೀತಿ ಮಾನ ಅವಮಾನ ಕಾನೂನು ಎಲ್ಲವೂ ಎಲ್ಲರಿಗೂ ಒಂದೇ ಅಲ್ಲವೇ.

ಸೋಲು ಸಂಕಷ್ಟಗಳನ್ನು ಎದುರಿಸುವುದು ಅವರಿಗೆ ಸಾಧ್ಯವಾಗುವುದಾದರೆ ನಮಗೆ ಏಕೆ ಆಗುವುದಿಲ್ಲ. ಇಲ್ಲಿಯೇ ಭಾರತದ ಸಾಮಾಜಿಕ ಮತ್ತು ಮಾನಸಿಕ ಅಸಮತೋಲನದ ತಾರತಮ್ಯ ಅಡಗಿರುವುದು.

ಭಂಡ ವ್ಯಕ್ತಿಗಳು, ಭಾವನೆಗಳನ್ನು ನಿಯಂತ್ರಿಸುವವರು, ಅಧಿಕಾರ ಹಣದ ಮೋಹಕ್ಕೆ ಒಳಗಾದವರು, ಜನರ ನಾಡಿ ಮಿಡಿತ ಅರ್ಥಮಾಡಿಕೊಂಡವರು, ಯಶಸ್ಸು ಮಾತ್ರವೇ ನಿಜವಾದ ಮಾನ ಮರ್ಯಾದೆ ಎಂದು ಭಾವಿಸಿರುವವರು ಜೀವನವನ್ನು ಹೆಚ್ಚು ಧೈರ್ಯದಿಂದ ಎದುರಿಸುತ್ತಾರೆ.

ಅದಕ್ಕೆ ವಿರುದ್ಧವಾಗಿ ಸೂಕ್ಷ್ಮ ಮನಸ್ಸಿನವರು, ಭಾವನಾ ಜೀವಿಗಳು, ಸಮಾಜದ ಮೌಲ್ಯಗಳನ್ನು ಗೌರವಿಸುವವರು ಮತ್ತು ಅದಕ್ಕೆ ಭಯಪಡುವವರು ಬದುಕು ಎದುರಿಸಲು ತುಂಬಾ ಶ್ರಮ ಪಡುತ್ತಾರೆ ಹಾಗು ಸದಾ ಕಾಲ ಅತೃಪ್ತರಾಗಿಯೇ ಇರುತ್ತಾರೆ. ವಿಫಲತೆಯ ಭಯದಿಂದ  ನರಳುತ್ತಾರೆ.

ಜೊತೆಗೆ ಈ ರಾಜಕಾರಣಿಗಳಲ್ಲಿ ಬಹುತೇಕರು 65/75 ವಯಸ್ಸಿನ ನಡುವಿನವರು ಹಾಗು ಅದಕ್ಕಿಂತ ಹಿರಿಯರು. ಆದರೂ ಅವರ ಉತ್ಸಾಹ 25 ರ ಯುವಕರನ್ನು ನಾಚುವಂತಿರುತ್ತದೆ. ಚುನಾವಣಾ ಸಮಯದಲ್ಲಿ ಅವರ ಓಡಾಟ ಹಾರಾಟ ಯುದ್ಧದ ಸೈನಿಕರ ‌ದೈಹಿಕ ಶಕ್ತಿಯನ್ನು ನೆನಪಿಸಿತ್ತದೆ. ಆದರೆ ‌ಸಾಮಾನ್ಯ ಜನ 45/55 ಸಮೀಪಿಸುತ್ತಿದ್ದಂತೆ ಜೀವನವೇ ಮುಗಿದು ಹೋದಂತೆ ಭಾವಿಸುತ್ತಾರೆ. ತಮ್ಮ ಚಟುವಟಿಕೆ ನಿಯಂತ್ರಿಸಿಕೊಳ್ಳುತ್ತಾರೆ.

ಇರುವುದು ಒಂದೇ ಜೀವನ. ನಾವು ಯಾವುದೇ ಕ್ಷೇತ್ರದಲ್ಲಿ ಇರಲಿ ಅಥವಾ ‌ಸಾಮಾನ್ಯ ಸರಳ ಜೀವನವೇ ಸಾಗಿಸುತ್ತಿರಲಿ ಒಟ್ಟಿನಲ್ಲಿ ಬದುಕಿನ ಕೊನೆಯವರೆಗೂ ಜೀವನೋತ್ಸಾಹ ಉಳಿಸಿಕೊಳ್ಳೋಣ. ಎಂತಹ ಸೋಲು ಅಥವಾ ಕೆಟ್ಟ ಪರಿಸ್ಥಿತಿಯೇ ಬರಲಿ ಮತ್ತೆ ಮತ್ತೆ ಗೆಲುವಿನ ಭರವಸೆಯೊಂದಿಗೆ ಮುನ್ನಡೆಯೋಣ. ಪ್ರಕೃತಿಯಲ್ಲಿ ಒಂದು ದಿನ ಲೀನವಾಗುವವರೆಗೂ..........
ಲೇಖನ:ವಿವೇಕಾನಂದ. ಎಚ್.ಕೆ. 9844013068..........
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ