Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಮುನಿರತ್ನ ಅವರ ಬಾಯಿಯನ್ನು ಯಾವಗ ಶುದ್ಧ ಮಾಡುತ್ತಿರಾ- CM

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯವರು ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವರು ಶಾಸಕ ಮುನಿರತ್ನ ಅವರ ಬಾಯಿಯನ್ನು ಯಾವಗ ಶುದ್ಧ ಮಾಡುತ್ತಿರಾ, ಊರಿಗೆ ಬುದ್ದಿ ಹೇಳುವ ಮೊದಲು ನಿಮ್ಮವರಿಗೆ ಬುದ್ದಿ ಹೇಳಿ ಎಂದು ಮುನಿರತ್ನ ಪ್ರಕರಣಕ್ಕೆ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಕಿಡಿಕಾರಿದ್ದಾರೆ.


ನಾಯಕರಲ್ಲಿ ದ್ವೇಷ-

ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯವನ್ನು ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತವಾಗಿಸಿಕೊಂಡಿದ್ಧಾರೆ. ಚುನಾವಣೆ ಮುಗಿದರೆ ಬಿಜೆಪಿಯವರು ಈ ನಾಡಿನ ದಲಿತರು, ಶೋಷಿತರನ್ನು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣುವುದಿಲ್ಲ. ತಳ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಶಾಸಕ ಮುನಿರತ್ನ ಅವರ ಬಾಯಿಂದ ಬಂದ್ದಂತಹ ಮಾತುಗಳೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶ್ಲೀಲವಾಗಿ ನಿಂದನೆ-


ವೈರಲ್‌ಆಗಿರುವ ಆಡಿಯೋದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯದವರನ್ನು ಅತ್ಯಂತ ಅಶ್ಲೀಲವಾಗಿ ನಿಂದಿಸಿದ್ದಾರೆ. ಗುತ್ತಿಗೆದಾರ ಚಲುವರಾಜು ಅವರ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳೆಲ್ಲವು ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿದೆ.ಬಿಜೆಪಿಯದ್ದು 40% ಕಮಿಷನ್‌ಸರ್ಕಾರ

 

ಬಿಜೆಪಿಯ 40% ಕಮಿಷನ್‌ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ಟಾಂಗ್​ ನೀಡಿದ್ದಾರೆ.ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್​ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಅವರ ಕುರಿತು ಮಾತನಾಡುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಶಾಸಕ ಮುನಿರತ್ನ ಅವರ ಹೇಳಿಕೆಯನ್ನು ಬೆಂಬಲಿಸಿ ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಅಥಾವ ರಾಜ್ಯದ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಟಾಂಗ್​ ಕೊಟ್ಟಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ