Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹ ಜ್ಯೋತಿಗೆ ಜಾತಿ ಪ್ರಮಾಣಪತ್ರ ಏಕೆ?’: ಸಿಎಂ ಶಿವಕುಮಾರ್ ಹೊಸ ಷರತ್ತುಗಳ ವಿರುದ್ಧ ಸಿ.ಟಿ. ರವಿ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
"ಜಾತಿಹೀನರ ಮನೆಯ
| ಜ್ಯೋತಿ ತಾ ಹೀನವೇ | ಜಾತಿ-ವಿಜಾತಿಯೆನ್ನಬೇಡ ದೇವನೊಲಿ | ದಾತನೇ ಜಾತ ಸರ್ವಜ್ಞ" ಎಂಬ ಸರ್ವಜ್ಞನ ವಚನವನ್ನು ಉಲ್ಲೇಖಿಸುವ ಮೂಲಕ, ರಾಜ್ಯ ಸರ್ಕಾರದ ಗೃಹ ಜ್ಯೋತಿಉಚಿತ ವಿದ್ಯುತ್ ಯೋಜನೆಗೆ ಹೊಸ ಷರತ್ತುಗಳನ್ನು ವಿಧಿಸುತ್ತಿರುವುದರ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಉಚಿತ ವಿದ್ಯುತ್ ಯೋಜನೆಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಕೇಳುತ್ತಿರುವುದನ್ನು ಪ್ರಶ್ನಿಸಿರುವ ಅವರು, ಗ್ಯಾರಂಟಿಗಳನ್ನು ಮುಂದುವರಿಸಲು ಸಾಧ್ಯವಾಗದ ಸರ್ಕಾರ ಇಂತಹ ನಾಟಕವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

​ಅಂದು ಎಲ್ಲರಿಗೂ ಫ್ರೀ, ಇಂದು ಹೊಸ ಷರತ್ತು!
​ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಸಿ.ಟಿ. ರವಿ
, ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಗೂ ಈಗಿನ ನಡವಳಿಕೆಗೂ ಇರುವ ವ್ಯತ್ಯಾಸವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

​ಅಂದಿನ ಭರವಸೆ: "ಅಧಿಕಾರಕ್ಕೆ ಬರುವ ಮುನ್ನ ಕಾಕಾ ಪಾಟೀಲನಿಗೂ ಫ್ರೀ, ಮಹದೇವಪ್ಪನಿಗೂ ಫ್ರೀ ಫ್ರೀಎನ್ನುತ್ತಾ ಯಾವುದೇ ತಾರತಮ್ಯವಿಲ್ಲದೆ ಗೃಹ ಜ್ಯೋತಿ ಯೋಜನೆ ಜಾರಿಗೆ ತರಲಾಯಿತು."

​ಇಂದಿನ ಸ್ಥಿತಿ: "ಆದರೆ ಇಂದು ಅದೇ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊಸ ಹೊಸ ಷರತ್ತುಗಳನ್ನು ವಿಧಿಸುವ ಮೂಲಕ ಸಾರ್ವಜನಿಕರನ್ನು ಸತಾಯಿಸುತ್ತಿದ್ದಾರೆ" ಎಂದು ರವಿ ವಾಗ್ದಾಳಿ ಮಾಡಿದ್ದಾರೆ.

​ಉಚಿತ ವಿದ್ಯುತ್‌ಗೆ ಜಾತಿಪ್ರಮಾಣಪತ್ರ ಏಕೆ?
​ಸರ್ಕಾರದ ಹೊಸ ನಿಯಮಾವಳಿಗಳ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು ಕೆಲವು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ.

​ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಫಲಾನುಭವಿಗಳ ಗುರುತಿನ ಚೀಟಿ ಕೇಳುವುದು ನ್ಯಾಯಸಮ್ಮತ. ಆದರೆ, ಅದಕ್ಕೆ ಜಾತಿ ಪ್ರಮಾಣಪತ್ರ ಕೇಳುತ್ತಿರುವುದು ಏಕೆ? ​ಈ ಯೋಜನೆಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ನಿಯಮ ಮಾಡಿರುವುದರ ಹಿಂದಿನ ತರ್ಕವೇನು? ಬೆಳಕಿಗೆ ಎಲ್ಲಿಂದ ಬಂತು ಜಾತಿ? ಎಂದು ರವಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

​"ಸರ್ಕಾರದ್ದು ಬರಿ ನಾಟಕ"
​ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹಾಗೂ ಗ್ಯಾರಂಟಿ ಯೋಜನೆಗಳ ನಿರ್ವಹಣಾ ಸಾಮರ್ಥ್ಯವನ್ನು ಸಿ.ಟಿ. ರವಿ ಮುಕ್ತವಾಗಿ ಟೀಕಿಸಿದ್ದಾರೆ. "ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುವ ಆರ್ಥಿಕ ಶಕ್ತಿ ಮತ್ತು ಸಾಮರ್ಥ್ಯ ಈ ಕಾಂಗ್ರೆಸ್ ಸರ್ಕಾರಕ್ಕೆ ಉಳಿದಿಲ್ಲ. ಈ ಕಾರಣಕ್ಕಾಗಿಯೇ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸಲು ಇಂತಹ ಹೊಸ ಷರತ್ತುಗಳ ನಾಟಕವನ್ನು ಸರ್ಕಾರ ಆಡುತ್ತಿದೆ" ಎಂದು ಅವರು ಆರೋಪಿಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.