Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು, ವಿಕಸಿತ ಭಾರತಕ್ಕೆ ಪ್ರೇರಕ ಶಕ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
"ವಿಜ್ಞಾನ ಕ್ಷೇತ್ರದಲ್ಲಿರುವ ಮಹಿಳೆಯರು ಸಂಶೋಧನೆ, ಆವಿಷ್ಕಾರ, ಆರೋಗ್ಯ, ಪರಿಸರ ರಕ್ಷಣೆ ಮತ್ತು ತಂತ್ರಜ್ಞಾನ ವಿಕಾಸದಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದ್ದಾರೆ ಎಂದು ಡಾ.ಜಿ. ಎನ್. ಮಲ್ಲಿಕಾರ್ಜುನಪ್ಪ ತಿಳಿಸಿದರು.


ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


"ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ದೇಶದ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ವೇಗ ನೀಡುತ್ತದೆ. ವಿಕಸಿತ ಭಾರತ ಎಂದರೆ ಆರ್ಥಿಕವಾಗಿ, ತಾಂತ್ರಿಕವಾಗಿ ಮತ್ತು ವೈಜ್ಞಾನಿಕವಾಗಿ ಶಕ್ತಿಶಾಲಿ ರಾಷ್ಟ್ರ. ದೇಶದ ಅಭಿವೃದ್ಧಿಯ ಗುರಿ ಸಾಧಿಸಲು ವಿಜ್ಞಾನದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ. ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಶೋಧನೆಗೆ ಹೆಚ್ಚು ಆಸಕ್ತಿ ತರಲಿ ವಿಜ್ಞಾನದಿಂದ ಶಕ್ತಿ, ವಿಜ್ಞಾನದಿಂದ ಪ್ರಗತಿ ಸಾಧ್ಯ" ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿದ ಚಳ್ಳಕೆರೆ ಯರ್ರಿಸ್ವಾಮಿ ಮಾತನಾಡಿ, "ಈ ದಿನವು ಭಾರತೀಯ ವಿಜ್ಞಾನ ಕ್ಷೇತ್ರದ ಮಹತ್ವವನ್ನು ಸ್ಮರಿಸುವುದು ಅಷ್ಟೇ ಅಲ್ಲ, ಯುವಪೀಳಿಗೆಗೆ ಸಂಶೋಧನಾ ಮನೋಭಾವವನ್ನು ಬೆಳೆಸುವ ಉದ್ದೇಶವೂ ಆಗಿದೆ. ರಾಮನ್ ರ ಆವಿಷ್ಕಾರ ವಿಜ್ಞಾನ ಸಂಶೋಧನೆಗೆ ಹೊಸ ದಿಕ್ಕು ದೊರಕಿತು. ಯುವಕರಲ್ಲಿ ಕುತೂಹಲ, ಸಂಶೋಧನಾ ಮನೋವೃತ್ತಿ ಮತ್ತು ಪ್ರಯೋಗಶೀಲತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಅಭಿವೃದ್ಧಿಗೆ ಇದನ್ನು ನೆನಪಿಸುವ ದಿನವೇ ರಾಷ್ಟ್ರೀಯ ವಿಜ್ಞಾನ ದಿನ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ, ಪ್ರೊ.ರವಿಕಾಂತ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಿ ಎಂದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎಂ. ಎನ್.ವಿದ್ಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಲಾಲ್ ಸಿಂಗ್ ನಾಯಕ್ ರಾಷ್ಟ್ರೀಯ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಪ್ರೊ. ಜೆ.ನಾಗರಾಜು, ಈ.ರುದ್ರಮುನಿ, ನಾಗಲಿಂಗರೆಡ್ಡಿ, ಇದ್ದರು. ಕಾಲೇಜಿನ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕು.ಸಾವಿತ್ರಿ ಪ್ರಾರ್ಥಿಸಿ, ಕು.ವರ್ಷಿಣಿ ವಂದಿಸಿದರು. ಕಾರ್ಯದರ್ಶಿ ಎಚ್.ಎಸ್. ಟಿ.ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ