Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೇಶದ ಅಭಿವೃದ್ಧಿಯ ಮುಂಚೂಣಿಯಲ್ಲಿ ಭಾರತದ ಮಹಿಳೆಯರು

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಮಹಿಳಾ ಸಬಲೀಕರಣವು ಅಭೂತಪೂರ್ವ ವೇಗವನ್ನು ಪಡೆದುಕೊಂಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಆರ್. ಅಶೋಕ್ ಅವರು ಶ್ಲಾಘಿಸಿದ್ದಾರೆ. ಬ್ಯಾಂಕ್ ಖಾತೆಯಿಂದ ಬಾಹ್ಯಾಕಾಶದವರೆಗೆ
, ಉದ್ಯಮಶೀಲತೆಯಿಂದ ರಾಷ್ಟ್ರೀಯ ಭದ್ರತೆಯವರೆಗೆ ಇಂದು ಭಾರತದ 'ನಾರಿ ಶಕ್ತಿ' ದೇಶದ ಅಭಿವೃದ್ಧಿಯ ಮುಂಚೂಣಿಯಲ್ಲಿ ನಿಂತಿದೆ ಎಂದು ಅವರು ಹೇಳಿದ್ದಾರೆ.

​ಮೋದಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳಿಂದಾಗಿ ದೇಶದ ಮಹಿಳೆಯರ ಜೀವನದಲ್ಲಿ ಆಗಿರುವ ಕ್ರಾಂತಿಕಾರಕ ಬದಲಾವಣೆಗಳ ಪ್ರಮುಖ ಅಂಕಿ-ಅಂಶಗಳನ್ನು ಅವರು ಹಂಚಿಕೊಂಡಿದ್ದಾರೆ.

Advertisement

​ಉದ್ಯಮಶೀಲತೆ ಮತ್ತು ಆರ್ಥಿಕ ಸಬಲೀಕರಣಛ
​ಎಂಎಸ್ಎಂಇ ಕ್ಷೇತ್ರದಲ್ಲಿ ಕ್ರಾಂತಿ: ದೇಶದಲ್ಲಿ ಪ್ರಸ್ತುತ
3 ಕೋಟಿಗೂ ಹೆಚ್ಚು ಮಹಿಳಾ ನೇತೃತ್ವದ MSMEಗಳು (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.

​ಸ್ಟಾರ್ಟ್‌ಅಪ್‌ಗಳಲ್ಲಿ ಮಹಿಳಾ ಹವಾ: ದೇಶದ ನವೋದ್ಯಮ ಪರಿಸರ ವ್ಯವಸ್ಥೆಯಲ್ಲಿ ಸುಮಾರು ಶೇ. 48 ರಷ್ಟು ಮಹಿಳೆಯರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

​ಸ್ವಸಹಾಯ ಗುಂಪುಗಳ ಬಲ: 10 ಕೋಟಿಗೂ ಹೆಚ್ಚು ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ.

​ಲಖಪತಿ ದೀದಿ: ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ 3 ಕೋಟಿಗೂ ಹೆಚ್ಚು ಮಹಿಳೆಯರು 'ಲಖಪತಿ ದೀದಿ'ಯರಾಗಿ ಹೊರಹೊಮ್ಮಿದ್ದಾರೆ.

​ಶಿಕ್ಷಣ ಮತ್ತು ಡಿಜಿಟಲ್ ಸಾಕ್ಷರತೆ:
​ಉನ್ನತ ಶಿಕ್ಷಣದಲ್ಲಿ ದಾಖಲೆ: 2014ರಲ್ಲಿ ಉನ್ನತ ಶಿಕ್ಷಣದಲ್ಲಿ ಕೇವಲ 9.86 ಲಕ್ಷದಷ್ಟಿದ್ದ ಮಹಿಳಾ ದಾಖಲಾತಿ ಸಂಖ್ಯೆ, ಮೋದಿ ಸರ್ಕಾರದ ಪ್ರೋತ್ಸಾಹದಿಂದಾಗಿ 2026ರ ವೇಳೆಗೆ 34 ಲಕ್ಷಕ್ಕೂ ಅಧಿಕಕ್ಕೆ ಏರಿಕೆಯಾಗಿದೆ.

​ಡಿಜಿಟಲ್ ಕ್ರಾಂತಿ: 'ಪಿಎಂಜಿದಿಶಾ' ಯೋಜನೆಯ ಮೂಲಕ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಡಿಜಿಟಲ್ ಸಾಕ್ಷರತೆ ಒದಗಿಸಿ, ಅವರನ್ನು ತಂತ್ರಜ್ಞಾನದ ಮುಖ್ಯವಾಹಿನಿಗೆ ತರಲಾಗಿದೆ.

​ಕಾರ್ಮಿಕರ ಸುರಕ್ಷತೆ: ಇ-ಶ್ರಮ ಪೋರ್ಟಲ್ ಮೂಲಕ ದೇಶದ ಕೋಟ್ಯಂತರ ಅಸಂಘಟಿತ ವಲಯದ ಮಹಿಳಾ ಕಾರ್ಮಿಕರನ್ನು ನೋಂದಾಯಿಸಿ, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲಾಗಿದೆ.

​ರಾಷ್ಟ್ರೀಯ ಭದ್ರತೆ ಮತ್ತು ಜಾಗತಿಕ ಮನ್ನಣೆ:
​ಸಶಸ್ತ್ರ ಪಡೆಗಳಲ್ಲಿ ನಾರಿ ಶಕ್ತಿ: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದ್ದು, ರಕ್ಷಣಾ ರಂಗದಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ.

​ಜಾಗತಿಕ ಮಟ್ಟದಲ್ಲಿ ಹೆಮ್ಮೆ: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತದಿಂದ ವಿಶ್ವದ ಅತ್ಯಂತ ದೊಡ್ಡ ಮಹಿಳಾ ಸೈನಿಕರ ತಂಡವನ್ನು ನಿಯೋಜಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತದ ನಾರಿ ಶಕ್ತಿಯ ಸಾಮರ್ಥ್ಯವನ್ನು ಸಾಬೀತುಪಡಿಸಲಾಗಿದೆ.

​"ಇಂದು ಭಾರತದ ಮಹಿಳೆಯರು ಕೇವಲ ಫಲಾನುಭವಿಗಳಾಗಿ ಉಳಿದಿಲ್ಲ, ಬದಲಿಗೆ ದೇಶದ ಪ್ರಗತಿಯ ರಥವನ್ನು ಮುನ್ನಡೆಸುವ ಶಕ್ತಿಯಾಗಿದ್ದಾರೆ. ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ನಾರಿ ಶಕ್ತಿಯ ಸಬಲೀಕರಣಕ್ಕೆ ಹೊಸ ಆಯಾಮ ಸಿಕ್ಕಿದೆ."
ಆರ್. ಅಶೋಕ್, ಹಿರಿಯ ಬಿಜೆಪಿ ನಾಯಕ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು