ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಅರಳು ಮಲ್ಲಿಗೆ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರೆನಹಳ್ಳಿಯಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ
ಸಮುದಾಯ ಆರೋಗ್ಯಾದಿಕಾರಿ ತೂಬಗೆರೆಯ ಶ್ರೀಮತಿ ಕಾವ್ಯ ರವರು ಮಾತನಾಡಿ ಪೂಜ್ಯರ ಹಾಗೂ ಅಮ್ಮನವರ ಕನಸಿನ ಯೋಜನೆ ಮಹಿಳಾ ಜ್ಞಾನ ವಿಕಾಸದ ಹಾದಿಯಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸಲಾಗಿದೆ.
ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಹದಿಹರೆಯದ ಬಾಲಕಿಯರಲ್ಲಿ ಕಂಡು ಬರುತ್ತಿರುವ ಸಮಸ್ಯೆ ಗಳ ಬಗ್ಗೆ ಪೋಷಕರು ಅರಿವು ಮೂಡಿಸಿಕೊಳ್ಳಬೇಕಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಅರಿವು ಮೂಡಿಸುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತಾಲೂಕು ಕೃಷಿ/ವಲಯ ಮೇಲ್ವಿಚಾರಕರಾದ ಲೋಹಿತ್ ಗೌಡ, ಜ್ಞಾನವಿಕಾಸ ಸಮನ್ವಯಾಧಿಕಾರಿ ಛಾಯಕುಮಾರಿ ಸನ್ನಿದಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



