Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ನ್ಯಾಷನಲ್ ಪ್ರೈ ಡ್  ಶಾಲೆಯಲ್ಲಿ   ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು.

 ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಿಸುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ಸತೀಶ್ ರಾಜ್ ಉದ್ಘಾಟಿಸಿ ಮಾತನಾಡಿ ಇಂದು ಜಾಗತಿಕ ಮಟ್ಟದಲ್ಲಿ ತಾಪಮಾನ ಕಡಿಮೆಯಾಗಲು ಹಾಗೂ ನಮ್ಮ ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪರಿಸರವನ್ನು ಕಾಪಾಡಿಕೊಂಡು ಬರಬೇಕಿದೆ. ಪ್ರಕೃತಿ ಉಳಿದರೆ ನಾವು ಉಳಿದಂತೆ ಗಿಡ ಮರಗಳನ್ನು ಬೆಳೆಸಿ ಹಸಿರಾಗಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ನಿಮಿಷ  ಅರುಣ್ ರವರು ಮಾತನಾಡಿ ಮಕ್ಕಳಿಗೆ ಪರಿಸರ ದಿನಾಚರಣೆಯ  ಹಿನ್ನೆಲೆ ಪರಿಸರ ಸಂರಕ್ಷಣೆ ಪರಿಸರದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅತಿ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಾದ  ಇಬ್ಬನಿ,  ಮನುಶ್ರೀ ಹಾಗೂ  ಪೃಥ್ವಿ ಸಿದ್ದಾರ್ಥ್ ಪರಿಸರ ದಿನದ ಕುರಿತು ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಹಾಗೂ ಆಶು ಭಾಷಣ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರಾದ ಶ್ರೀಮತಿ ರಶ್ಮಿ ಸತೀಶ್ ರಾಜ್ ರವರು ,ವಿದ್ಯಾರ್ಥಿಗಳು , ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!