ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಬಸವೇಶ್ವರ ನಗರದಲ್ಲಿರುವ ಶ್ರೀ ಸಾಯಿ ಲಿಟಲ್ ಹಾರ್ಟ್ಸ್ ಕಿಡ್ಸ್ ಶಾಲೆಯಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪರಿಸರ ಜಾಗೃತಿ ಮೂಡಿಸುವ ಈ ವಿಶೇಷ ದಿನದಂಗವಾಗಿ ಶಾಲೆಯ ಪುಟ್ಟ ಮಕ್ಕಳು (ಚಿಣ್ಣರು) ತಾವೇ ಉತ್ಸಾಹದಿಂದ ಮುನ್ನೆಡೆದು ಸಸಿಗಳನ್ನು ನೆಡುವ ಮೂಲಕ ದಿನದ ಮಹತ್ವವನ್ನು ಎತ್ತಿಹಿಡಿದರು. ಗಿಡಗಳಿಗೆ ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.
ಪರಿಸರ ಪ್ರೇಮ ಮೆರೆದ ಪುಟಾಣಿಗಳು:
ಕೇವಲ ಪಠ್ಯಕ್ಕೆ ಸೀಮಿತವಾಗದೆ, ಪ್ರಕೃತಿಯನ್ನು ಪ್ರೀತಿಸುವುದನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮಕ್ಕಳು ಪರಿಸರ ಕಾಳಜಿ ಮೆರೆದದ್ದು ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಬಿ. ಜೆ. ಜಲಜಾಕ್ಷಿ ಹಾಗೂ ಶಿಕ್ಷಕಿಯರಾದ ಚೂಡಾಮಣಿ, ಗೀತಾ ಮತ್ತು ಸುಮಲತಾ ಉಪಸ್ಥಿತರಿದ್ದು, ಮಕ್ಕಳಿಗೆ ಗಿಡಗಳ ಆರೈಕೆ ಹಾಗೂ ಪರಿಸರದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ಶಾಲೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಸಾಥ್ ನೀಡಿದರು.



