Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಪರಿಸರ ದಿನಾಚರಣೆ: ಮಾಜಿ ಸಚಿವ ಆರ್. ಅಶೋಕ್ ಅವರಿಂದ ಗಿಡ ನೆಡುವ ಕಾರ್ಯಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್‌ನಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಾಜಿ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಆರ್. ಅಶೋಕ್ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಆರ್. ಅಶೋಕ್ ಅವರು, "ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಹಸಿರು, ಸ್ವಚ್ಛ ಹಾಗೂ ಆರೋಗ್ಯಕರ ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರೂ ಕನಿಷ್ಠ ಒಂದು ಗಿಡವನ್ನು ನೆಟ್ಟು, ಕೇವಲ ನೆಡುವುದಷ್ಟೇ ಅಲ್ಲದೆ ಅದನ್ನು ಪೋಷಿಸುವ ಜವಾಬ್ದಾರಿಯನ್ನೂ ಹೊರಬೇಕು" ಎಂದು ಕರೆ ನೀಡಿದರು.

​"ಈ ಬಾರಿಯ ವಿಶ್ವ ಪರಿಸರ ದಿನದಂದು ಪ್ರಕೃತಿ ಸಂರಕ್ಷಣೆ ಮತ್ತು ಹಸಿರು ಕರ್ನಾಟಕ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಸಂಕಲ್ಪ ಮಾಡೋಣ" ಎಂದು ಅವರು ಇದೇ ವೇಳೆ ಆಶಯ ವ್ಯಕ್ತಪಡಿಸಿದರು.

​ಕಾರ್ಯಕ್ರಮದಲ್ಲಿ ಪದ್ಮನಾಭನಗರ ಮಂಡಲ ಅಧ್ಯಕ್ಷ ಎನ್. ಲಕ್ಷ್ಮೀಕಾಂತ್, ಬಿಬಿಎಂಪಿಯ ಮಾಜಿ ಪಾಲಿಕೆ ಸದಸ್ಯ ಉಮೇಶ್ ಕಬ್ಬಾಳ್, ಪಕ್ಷದ ಪ್ರಮುಖ ಮುಖಂಡರು, ಉತ್ಸಾಹಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು, ಗಿಡ ನೆಡುವ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!