Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜು ದೊಡ್ಡಬಳ್ಳಾಪುರ
 

ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಕೃಷ್ಣ ಪ್ರಸಾದ್, ವಿಶ್ವ ಭೂಮಿ ದಿನಾಚರಣೆಯನ್ನು ಅಮೇರಿಕಾದಲ್ಲಿ 1970 ಮೊದಲಬಾರಿಗೆ ಆಚರಣೆ ಮಾಡಲಾಯಿತು ನಾವು ನಮ್ಮ ಪರಿಸರದ ಸುತ್ತ ಮುತ್ತಲಿನ ಎಲ್ಲಾರೂ ಪ್ಲ್ಯಾಸ್ಟಿಕ್ ಬಳಕೆ ನಿಷೇಧ ಮಾಡದ ಹೊರತು ಭೂಮಿ ನೀರು ಗಾಳಿ ಶುದ್ದವಾಗಿರಲು ಸಾದ್ಯವಾಗುವುದಿಲ್ಲ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಹಾರ ಸಮತೊಲನ ಕಾಪಾಡಬೇಕು ನೀರು ಗಾಳಿ  ಮಲಿನ ವಾಗಲು ಬಿಡಬಾರದು ಎಂದು ಹೇಳಿದರು ಇಂದು ದೊಡ್ಡಬಳ್ಳಾಪುರ ಸುತ್ತ ಮುತ್ತ ನೀರು ಕುಡಿಯಲು ಯೋಗ್ಯವಾಗಿಲ್ಲ ಕಾರಣ ಭೂಮಿ ನೀರು ಮಲಿನವಾಗಿವೆ ಅದುದರಿಂದ ಶುದ್ದ ನೀರು ಗಾಳಿ ನಮಗೆ ದೊರೆಯಬೇಕಾದರೆ ಭೂಮಿಯು ಶುದ್ಧತೆಯನ್ನು ನಾವು ಮೋದಲು ಕಾಪಾಡಬೇಕು ಎಂದು ಹೇಳಿದರು. 

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸೂರ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ ಸಿ ಮಂಜುನಾಥ್ ನಮ್ಮ ಹಿರಿಯರು ಅವರ ಕಾಲದಲ್ಲಿ ನೀರಾಗಲಿ ಗಾಳಿಯಾಗಲಿ ಮಲಿನ ವಾಗಲು ಬಿಡುತ್ತಿರಲಿಲ್ಲ ಅದುದರಿಂದ ಅವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾದ್ಯವಾಯಿತು ಎಂದು ಹೇಳಿದರು ಹಿರಿಯ ಉಪನ್ಯಾಸಕರಾದ ಟಿ ಕೆ ಬಾಲಕೃಷ್ಣ ಮಾತನಾಡಿ ಇವತ್ತಿನ ದಿನಗಳಲ್ಲಿ ನಾವೇಲ್ಲರು ಉತ್ತಮ ಪರಿಸರ ನಿರ್ಮಾಣದತ್ತ ಗಮನ ಕೊಡಬೇಕಾಗಿದೆ ಎಂದು ಹೇಳಿದರು. 

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ರಂಗನಾಥ್ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಲು ತುಂಬಾ ಸಂತೋಷವಾಯಿತು. ಇಂತಹ ಉತ್ತಮ ಉಪಯುಕ್ತ ಮಾಹಿತಿಗಳು ನಮ್ಮ ವಿದ್ಯಾರ್ಥಿಗಳಿಗೆ ತುಂಬಾ ಅವಶ್ಯವಾಗಿತ್ತು. ಜೊತೆಗೆ ಈ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನಡೆಯಲು ಕಾರಣಕರ್ತರಾದ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳು ನ್ಯಾಯಮೂರ್ತಿಗಳಾದ "ಬೊಲ್ ಪಂಡಿತ್ ಸರ್"ರವರಿಗೆ ತುಂಬು ಹೃದಯದ ದನ್ಯವಾದಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪಿ. ವೈ. ರಾಮಚಂದ್ರ (ಪಣಿ), ಬೈರೇಗೌಡ ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು