ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಜೂನ್ 21 ರ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕಳೆದ ಹಲವು ವರ್ಷಗಳಿಂದ ನಗರದಲ್ಲಿ ಟ್ರಸ್ಟ್ ನ ವತಿಯಿಂದ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ.ಈ ಬಾರಿಯ ಕಾರ್ಯಕ್ರಮವನ್ನು ಭಾಷೆಟ್ಟಿ ಹಳ್ಳಿ ಸಮೀಪ ಸೂರ್ಯ ಪಿ ಯು ಕಾಲೇಜಿನಲ್ಲಿ ಭಾಷೆಟ್ಟಿ ಹಳ್ಳಿ ಪಟ್ಟಣ ಪಂಚಾಯ್ತಿ, ಸೂರ್ಯ ಪಿ. ಯು. ಕಾಲೇಜು ಸಹಯೋಗದಲ್ಲಿ ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನ ಅಧ್ಯಕ್ಷ ಕೆ. ಎಂ. ಹನುಮಂತರಾಯಪ್ಪ ತಿಳಿಸಿದರು.
ನಗರದ ಕೆ.ಎಂ.ಎಚ್. ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ವಿಶ್ವ ಯೋಗ ದಿನಾಚರಣೆಯನ್ನು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗುತ್ತಿತ್ತು ಈ ಬಾರಿ ಸಿದ್ಧತೆ ಕೊರತೆಯಿಂದಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸಮೀಪದ ಸೂರ್ಯ ಪಿ ಯು ಕಾಲೇಜಿನಲ್ಲಿ ಶ್ರೀ ರಾಮ ಆಸ್ಪತ್ರೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದ್ದು ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.
ಟ್ರಸ್ಟ್ ಉಪಾಧ್ಯಕ್ಷ ತ.ನ. ಪ್ರಭುದೇವ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನಲ್ಲಿ ವಿಶೇಷ ದಿನವನ್ನಾಗಿ ವಿಶ್ವ ಯೋಗ ದಿನವನ್ನು ಶ್ರೀ ದಿವ್ಯಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಟ್ರಸ್ಟ್ ನಡೆಸಿಕೊಂಡು ಬರುತ್ತಿದ್ದು ಈ ಬಾರಿ ಪೂರ್ವ ಸಿದ್ದತ ಸಭೆಗಳ ಕೊರತೆಯಿಂದಾಗಿ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಶ್ರೀ ರಾಮ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಲಾಗಿದೆ. ಎಂದಿನಂತೆ ಸಾರ್ವಜನಿಕರು, ಯೋಗಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಸುದ್ದಿ ಗೋಷ್ಠಿಯಲ್ಲಿ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನ ಕಾರ್ಯದರ್ಶಿ ಬಿ. ಜಿ.ಅಮರ್ ನಾಥ್, ಸಹಕಾರ್ಯದರ್ಶಿ ವತ್ಸಲಾ, ಖಜಾಂಚಿ ಶ್ರೀನಿವಾಸ್, ಲೀಲಾ ಮಹೇಶ್, ಯಶೋದಾ, ಸೀತಾರಾಮ್, ಗಿರೀಶ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.



