Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲಗೈ ಜಾತಿ ಸಮುದಾಯಗಳು ಹೊಲೆಯ ಎಂದು ಬರೆಸಿ : ಎಸ್‌.ಯು.ರಮೇಶ್ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಲಗೈ ಜಾತಿ ಸಮುದಾಯಗಳು ಹೊಲೆಯ ಎಂದು ಬರೆಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು. 

ನಗರದ ಟಿ.ಬಿ.ನಾರಾಯಣಪ್ಪ ಬಡಾವಣೆ ಬಳಿ ಮಹಾಸಭಾ ಸಂಘದ ತಾಲ್ಲೂಕು ಘಟಕದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ನಾಗಮೋಹನ್ ದಾಸ್ ಅವರು‌ ನಡೆಸಿದ ಸಮೀಕ್ಷೆಯಲ್ಲಿ ಹಲವು ಗೊಂದಲಗಳಿದ್ದ ಕಾರಣಕ್ಕೆ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಸ್ಪಷ್ಟ ಅಂಕಿ ಸಂಖ್ಯೆ ಸಿಕ್ಕಿಲ್ಲ.

ಹಾಗಾಗಿ ರಾಜ್ಯ ಸರ್ಕಾರದ ಹಿಂದುಳಿದ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲಾ ಬಲಗೈ ಜಾತಿ ಸಂಬಂಧಿಸಿದ ಬಂಧುಗಳು ಹೊಲೆಯ ಎಂದು, ಬೌದ್ಧ ಧರ್ಮ ಪಾಲಿಸುವವರು ಬೌದ್ಧ ಧರ್ಮ ಎಂದು ತಪ್ಪದೇ ನಮೂದಿಸಬೇಕು. ಸರ್ಕಾರ ಸಮೀಕ್ಷೆಯ ಆಧಾರದ ಮೇಲೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಸೌಲಭ್ಯವನ್ನು ನೀಡುತ್ತದೆ. ಆದ್ದರಿಂದ ನಮ್ಮ ಮೂಲ ಜಾತಿ ಹಾಗೂ ಉಪ ಜಾತಿಯನ್ನು ನಮೂದಿಸಿದರೆ, ನಮ್ಮ ನಿಜವಾದ ಜನಸಂಖ್ಯೆಯ ಅನುಗುಣವಾಗಿ ಒಳ ಮೀಸಲಾತಿ ಸೌಲಭ್ಯ ದೊರೆಯಲಿದೆ. ಇಲ್ಲದಿದ್ದರೆ ನಮ್ಮ ಸಮುದಾಯಕ್ಕೆ ನಷ್ಟವಾಗಲಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ರಾಜು ಸಣ್ಣಕ್ಕಿ, ಖಜಾಂಚಿ ಕನ್ನಮಂಗಲ ರಮೇಶ್, ಸಹ ಕಾರ್ಯದರ್ಶಿ ಕೆಸ್ತೂರು ಮುನಿರಾಜು ಕಾರ್ಯದರ್ಶಿ ಜಗದೀಶ್, ತಿಮ್ಮರಾಜು, ಮಹಿಳಾ ಘಟಕದ ಅಧ್ಯಕ್ಷೆ ಕಮಲಮ್ಮ,

ಮಹಾಸಭಾದ ಮಾಜಿ ಅಧ್ಯಕ್ಷ ಬಾಲಕೃಷ್ಣ, ಕೊನಘಟ್ಟ ವಿಎಸ್‌ಎಸ್‌ಎನ್ ಉಪಾಧ್ಯಕ್ಷ ರಮೇಶ್, ಹಿರಿಯ ಮುಖಂಡರಾದ ಮರಿಯಪ್ಪ, ಮಲ್ಲರಾಜು, ಮುನಿಕೃಷ್ಣ, ಗೂಳ್ಯ ಹನುಮಣ್ಣ, ಶಿವಶಂಕರ್, ರವಿ, ತಳಗವಾರ ಪುನೀತ್ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ