Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಶೂಟಿಂಗ್ ಗೆ ಮರಗಳ ಮಾರಣ ಹೋಮ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಚ್‌ಎಂಟಿ ಅನುಭೋಗದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ ಟಾಕ್ಸಿಕ್
ಎಂಬ ಸಿನಿಮಾ ಚಿತ್ರೀಕರಣ ನಡೆದಿದ್ದು, ಇದಕ್ಕಾಗಿ ಸಾವಿರಾರು ಗಿಡ-ಮರಗಳನ್ನು ಕಡಿಯಲಾಗಿದೆ. ಕೂಡಲೇ ಟಾಕ್ಸಿಕ್ ಚಿತ್ರೀಕರಣ ಸ್ಥಗಿತಗೊಳಿಸುವಂತೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ ಮಾಡಿದೆ.

ಇದಕ್ಕೆ ಅನುಮತಿ ನೀಡಿದ ಅಧಿಕಾರಿ ಅಥವಾ ಅನುಮತಿ ಪಡೆಯದೆ ಮರ ಕಡಿದ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿರುವುದನ್ನು ಸ್ವಾಗತಿಸಿದ್ದು ಪರಿಸರ ಹಾನಿ ಮಾಡಿ ಸಾವಿರಾರು ವನ್ಯಜೀವಿಗಳ ಆಶ್ರಯ ಕಸಿದ ಕಾರಣ ಸಿನಿಮಾ ನಿರ್ಮಾಪಕ ಮತ್ತು ನಿರ್ದೇಶಕನ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಅಪರಾಧ ಪ್ರಕರಣ ದಾಖಲಿಸಿ: ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿದೆ ಎನ್ನಲಾದ ಅರಣ್ಯ ಭೂಮಿಯಲ್ಲಿ ಹಲವು ತಿಂಗಳಿಂದ ಟಾಕ್ಸಿಕ್ಎಂಬ ಹೆಸರಿನ ಚಲನಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಇದಕ್ಕಾಗಿ ಸಾವಿರಾರು ಗಿಡ-ಮರಗಳನ್ನು ಕಡಿದು ಸೆಟ್ ಹಾಕಲಾಗಿದೆ.

ಇದಕ್ಕೆ ಅನುಮತಿ ನೀಡಿದ್ದರೆ, ಆ ಅಧಿಕಾರಿ ವಿರುದ್ಧ ಕ್ರಮ ಆಗಬೇಕು. ಅನುಮತಿ ಪಡೆಯದೆ ಗಿಡ-ಮರಗಳನ್ನು ಕಡಿದಿದ್ದರೆ, ಚಿತ್ರತಂಡದ ವಿರುದ್ಧ ಸೇರಿದಂತೆ ಕಾರಣರಾದ ಎಲ್ಲರ ವಿರುದ್ಧವೂ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಸೂಚಿಸಿರುವುದಾಗಿ ಸಚಿವರಿಗೆ ವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದರು.

ಎಚ್‌ಎಂಟಿ ಅನುಭೋಗದಲ್ಲಿರುವ ಜಾಗವು ಅರಣ್ಯ ಇಲಾಖೆಗೇ ಸೇರಿದ್ದು. ತನ್ನ ಸ್ವಾಧೀನದಲ್ಲಿರುವ ಈ ಭೂಮಿಯನ್ನು ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಅರಣ್ಯೇತರ ಚಟುವಟಿಕೆಗಳೂ ನಡೆಯುತ್ತಿವೆ.

ಈ ಪ್ರದೇಶದಲ್ಲಿದ್ದ ಮರ-ಗಿಡಗಳನ್ನು ಕಡಿದಿರುವುದು ಉಪಗ್ರಹ ಆಧಾರಿತ ಚಿತ್ರದಿಂದ ಗೋಚರಿಸುತ್ತದೆ. ಸಾಲದ್ದಕ್ಕೆ ತನ್ನ ಸುಪರ್ದಿಯಲ್ಲಿದ್ದ ಅರಣ್ಯ ಭೂಮಿ ಹಾಗೂ ಖಾಲಿ ಜಾಗಗಳನ್ನು ಸಿನಿಮಾ ಚಿತ್ರೀಕರಣಕ್ಕೆ ದಿನದ ಆಧಾರದ ಮೇಲೆ ಬಾಡಿಗೆಗೆ ನೀಡುತ್ತಿರುವುದೂ ಗಮನಕ್ಕೆ ಬಂದಿದೆ.

ಅರಣ್ಯದಲ್ಲಿ ನೂರಾರು ಮರಗಳ ಕಡಿದು ಟಾಕ್ಸಿಕ್ ಸಿನಿಮಾ ಶೂಟಿಂಗ್ ಮಾಡಲಾಗಿದೆ. ಈ ಪ್ರದೇಶಕ್ಕೆ ಸ್ವತಃ ಅರಣ್ಯ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಭಾಗಕ್ಕೆ ಹಾನಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಅರಣ್ಯ ಸಚಿವ ಖಂಡ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ವೇಳೆ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿರುವ ಕೃತ್ಯವು ಸ್ಯಾಟೆಲೈಟ್ ಚಿತ್ರಗಳಿಂದ ಬಯಲಾಗಿದೆ. ಕೂಡಲೇ ಸಿನಿಮಾ ನಿರ್ಮಾಪಕರನ್ನು ಮತ್ತು ನಿರ್ದೇಶಕರನ್ನು ಬಂಧಿಸಬೇಕೆಂದು ಮತ್ತು ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಬೇಕು ಎಂದು ಅಧ್ಯಕ್ಷ ಎಸ್.ಟಿ.ನವೀನ್ ಕುಮಾರ್, ಉಪಾಧ್ಯಕ್ಷ ಮತ್ತು ಕಾನೂನು ಸಲಹೆಗಾರ ಡಾ. ಎಂ.ಸಿ.ನರಹರಿ, ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್, ಸಂಚಾಲಕ ಟಿ.ರುದ್ರಮುನಿ, ಕಾರ್ಯದರ್ಶಿ ತಿಪ್ಪೇಸ್ವಾಮಿ ಎಚ್ಚರಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ