Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ, ಹೈಕಮಾಂಡ್ ತೀರ್ಮಾನವೇ ಅಂತಿಮ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ತಂದೆಯೇ 5 ವರ್ಷ ಸಿಎಂ ಎಂಬ ಹೇಳಿಕೆ ಅವರ ವೈಯಕ್ತಿಕ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ರು ಗೊತ್ತಿಲ್ಲ. ಅಂತಿಮವಾಗಿ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಹೈ ಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಎಂದು ಹೇಳುತ್ತಿದ್ದೀರಾ, ಅಷ್ಟೇ ಗೊಂದಲ ಇದ್ರೆ ಸಿಎಲ್​ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರೂ ಏನೂ ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.


ಒಪ್ಪಂದ ಪ್ರಸ್ತಾವ ಇಲ್ಲ:
ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಒಪ್ಪಂದದ ಪ್ರಸ್ತಾಪ ಇಲ್ಲ. ಒಪ್ಪಂದದ ಪ್ರಶ್ನೆಯ ಉದ್ಬವವಾಗುವುದಿಲ್ಲ. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹೈಕಮಾಂಡ್ ಅಲ್ವಾ
, ಹೈಕಮಾಂಡ್ ಎಷ್ಟು ದಿನ ಮುಖ್ಯಮಂತ್ರಿ ಆಗಿ ಇರು ಅಂತ ಹೇಳುತ್ತಾರೆ ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಪರಮೇಶ್ವರ್ ಹೇಳಿದರು.


ಪ್ರೆಸ್ ರಿಲೀಸ್ ಅಗತ್ಯ ಏನಿತ್ತು?:
ಮೈಸೂರಿನಲ್ಲಿ ಡ್ರಗ್ಸ್ ದಾಳಿಯ ಮೊದಲ ವರದಿಯಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿಲ್ಲ ಅಂತ ಹೇಳಿದ್ರು. ಈಗ ಎನ್​ಸಿಬಿ ಅವರು ವಾಪಸ್​​ ಹೋದ ಮೇಲೆ ಪ್ರೆಸ್ ರಿಲೀಸ್ ಮಾಡಿ ಡ್ರಗ್ಸ್ ಸಿಕ್ಕಿದೆ ಅಂತ ಹೇಳಿದ್ರು. ಮೈಸೂರು ಕಮಿಷನರ್ ವಿಚಾರಿಸಿದಾಗ ಇಲ್ಲಿ ಏನು ಸಿಕ್ಕಿಲ್ಲ ಅಂತಾನೇ ಹೇಳಿದ್ರು. ಎನ್​ಸಿಬಿ ಅವರು ಕೋರ್ಟ್​ನಲ್ಲಿ ಕೊಟ್ಟ ಹೇಳಿಕೆಯಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿರುವ ಬಗ್ಗೆ ಉಲ್ಲೇಖ ಮಾಡಿಲ್ಲ. ಅಲ್ಲಿಗೆ ಹೋಗಿ ಪ್ರೆಸ್ ರಿಲೀಸ್ ಮಾಡುವ ಅಗತ್ಯ ಏನಿತ್ತು
? ಎಂದು ಗೃಹ ಸಚಿವರು ಪ್ರಶ್ನಿಸಿದರು.


ರಾಜ್ಯದ ಎಲ್ಲಾ ಕೆಮಿಕಲ್ ಪ್ಯಾಕ್ಟರಿ ಚೆಕ್ ಮಾಡಿ ಅಂತ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ನಾನು ಸೂಚನೆ ನೀಡಿದ್ದೇನೆ. ಕೆಮಿಕಲ್ ಪ್ಯಾಕ್ಟರಿಗೆ ಯಾವ ಇಲಾಖೆ ಅನುಮತಿ ನೀಡುತ್ತೆ, ಅವರು ಅದನ್ನು ಚೆಕ್ ಮಾಡಿ ಅಂತ ಹೇಳಿದ್ದೇನೆ. ಡ್ರಗ್ಸ್ ಪತ್ತೆ ಮಾಡುವುದಕ್ಕೆ ಸ್ಪೆಷಲ್ ಪೊಲೀಸ್ ತಂಡ ಬೇಡ, ಈಗಾಗಲೇ ತಂಡ ಇದೆ. ಅವರ ಕೈಯಲ್ಲಿ ಸ್ವಲ್ಪ ಕೆಲಸ ಮಾಡಿಸಬೇಕು ಎಂದು ತಿಳಿಸಿದರು.

ಕ್ಯಾಬಿನೆಟ್ ನಿರ್ಧಾರ:
ಅಲ್ಪಸಂಖ್ಯಾತ ಹಾಗೂ ಯಾವುದೇ ಸಮುದಾಯವರಿಗೆ ಸಾಲ ಮನ್ನಾ ಮಾಡುವ ಕೆಲಸ ಮಾಡಿದ್ದೇವೆ. ಹಿಂದೆಯೂ ರೈತರ ಸಾಲ‌ಮನ್ನಾ ಮಾಡಿರಲಿಲ್ವಾ
? ಎಂದು ಪ್ರಶ್ನಿಸಿದ ಸಚಿವರು ಕೇಂದ್ರ ರಾಜ್ಯ ಎರಡೂ ಸರ್ಕಾರಗಳು ಕೂಡ ಸಾಲ ಮನ್ನಾ ಮಾಡುತ್ತಾ ಬರುತ್ತಿದೆ. ಇದರಲ್ಲಿ ರಾಜಕೀಯ ಏನಿಲ್ಲ ಎಂದು ಡಾ.ಪರಮೇಶ್ವರ ತಿಳಿಸಿದರು.

ಸಿಎಂ ಆಗುವ ಕುರಿತು ಪ್ರತಿಕ್ರಿಯೆ:
ಅಭಿಮಾನಿಗಳು, ಹಿತೈಷಿಗಳು ಮುಂದಿನ ಮುಖ್ಯಮಂತ್ರಿ ಎಂದು ಜೈಕಾರ ಹಾಕೋದು ಸಹಜ. ಮೊನ್ನೆ ನನಗೂ ಮುಂದಿನ ಪರಮೇಶ್ವರ್ ಎಂದು ಹೇಳಿದ್ರು. ಇನ್ನೊಬ್ಬರಿಗೂ ಹೇಳ್ತಾರೆ. ಅದು ಅಭಿಮಾನಿಗಳ ಆಸೆ ಅಷ್ಟೇ. ಅಂತಿಮವಾಗಿ ತೀರ್ಮಾನ ಮಾಡೋದು ಹೈಕಮಾಂಡ್ ಎಂದ ಪರಮೇಶ್ವರ್ ನಗುತ್ತಾ ತೆರಳಿದರು.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ