ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದ್ದಾರೆ.
ಲೋಕಭವನದಲ್ಲಿ ಆಯೋಜಿಸಲಾಗಿರುವ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಧಿಕೃತವಾಗಿ ಆಗಮಿಸುವಂತೆ ಯಡಿಯೂರಪ್ಪ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಆತ್ಮೀಯ ಆಹ್ವಾನ ನೀಡಿದರು.



