Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ಮಳೆ ಸಾಧ್ಯತೆ, ಚಿತ್ರದುರ್ಗ ಸೇರಿ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜನತೆಗೆ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಹಲವೆಡೆ ಗುಡುಗು
, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯು ಈಗಾಗಲೇ ರಾಜ್ಯದ ಹಲವೆಡೆ ತಲ್ಲಣ ಸೃಷ್ಟಿಸಿದ್ದು, ಮುಂದಿನ ದಿನಗಳ ಮಳೆ ಮುನ್ಸೂಚನೆಯ ಸಂಪೂರ್ಣ ವಿವರ ಇಲ್ಲಿದೆ.

ಈ ಏಳು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಭೀತಿ!-
ಹವಾಮಾನ ಇಲಾಖೆಯ ವರದಿಯ ಪ್ರಕಾರ
, ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಈ ಕೆಳಗಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಉತ್ತರ ಒಳನಾಡು: ಧಾರವಾಡ, ಗದಗ ಮತ್ತು ಹಾವೇರಿ.
ದಕ್ಷಿಣ ಒಳನಾಡು: ಶಿವಮೊಗ್ಗ
, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು. 

ಕರಾವಳಿ ಭಾಗದಲ್ಲಿ ಸಾಧಾರಣ ಮಳೆ-
ಕರಾವಳಿಯ ಮೂರೂ ಜಿಲ್ಲೆಗಳಾದ ದಕ್ಷಿಣ ಕನ್ನಡ
, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

50-60 ಕಿ.ಮೀ ವೇಗದ ಬಿರುಗಾಳಿ ಎಚ್ಚರಿಕೆ!-
ಉತ್ತರ ಒಳನಾಡಿನ ಬಾಗಲಕೋಟೆ
, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಇದರೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

ರಾಜಧಾನಿ ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ವರುಣನ ಸಿಂಚನ-
ಬೆಂಗಳೂರು ನಗರ
, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್